ಉಡುಪಿ: ಮೀನುಗಾರ ಕಾರ್ಮಿಕನಿಗೆ ಚೂರಿ ಇರಿದು ಹತ್ಯೆ ಮಾಡಿದ ಘಟನೆ ಮಲ್ಪೆಯಲ್ಲಿ ಇಂದು ಬೆಳಗ್ಗೆ ನಡೆದಿದೆ. ಚಿಕ್ಕಮಗಳೂರು ಮೂಲದ ಅಭಿಷೇಕ್ (24) ಕೊಲೆಯಾದ ವ್ಯಕ್ತಿ.
Sponsoredರಾಯಚೂರು ಮೂಲದ ಗೋಂವಿಂದ ರಾಜು ಕೊಲೆ ಆರೋಪಿ.
ಮುಂಜಾನೆ ಮಲ್ಪೆ ಬಂದರಿನಲ್ಲಿ ಯುವಕನಿಗೆ ಆರೋಪಿ ಚಾಕು ಇರಿದು ಪರಾರಿಯಾಗಿದ್ದ. ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ವಿಚಾರಣೆ ಸಂದರ್ಭದಲ್ಲಿ ಕುಡಿದ ಮತ್ತಿನಲ್ಲಿ ಆರೋಪಿ ಚೂರಿ ಇರಿದಿರುವುದು ಗೊತ್ತಾಗಿದೆ. ಅಭಿಷೇಕ್ ಶ್ರೀ ಮಹಾಕಾಳಿ ಬೋಟ್‌ನಲ್ಲಿ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ. ಈ ಕುರಿತು ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




