ಬೆಳ್ತಂಗಡಿ: ಪರಿಶಿಷ್ಟ ಜಾತಿಯ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ವೇಣೂರು ಠಾಣಾ ಪೊಲೀಸರು ಆರೋಪಿ ಸೈಯ್ಯದ್ ಮಹಮ್ಮದ್ ಮುಸ್ತಾಕ್ ನನ್ನು ಬಂಧನ ಮಾಡಿದ್ದಾರೆ.
Sponsoredಅ.24 ರಂದು ಮಧ್ಯಾಹ್ನ ವೇಣೂರು ಠಾಣಾ ವ್ಯಾಪ್ತಿಯಲ್ಲಿ ಕೆಲಸ ಮಾಡುತ್ತಿದ್ದ ಪರಿಶಿಷ್ಟ ಜಾತಿಗೆ ಸೇರಿದ ಯುವತಿಯ ಬಳಿ ದ್ವಿಚಕ್ರ ವಾಹನದಲ್ಲಿ ಬಂದ ಬೆಳ್ತಂಗಡಿ ವೇಣೂರು ನಿವಾಸಿ ಸೈಯ್ಯದ್ ಮಹಮ್ಮದ್ ಇಸಾಕ್ (61) ಎಂಬಾತ ಸಾರ್ವಜನಿಕ ಸ್ಥಳದಲ್ಲಿ ಅಸಭ್ಯವಾಗಿ ಮಾತನಾಡುತ್ತಾ, ಹಣದ ಆಮಿಷವೊಡ್ಡಿ, ಲೈಂಗಿಕ ಕಿರುಕುಳ ನೀಡಿರುವುದಾಗಿ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಸದ್ರಿ ಆರೋಪಿಯನ್ನು ವಶಕ್ಕೆ ಪಡೆಯಲಾಗಿದ್ದು, ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ.




