Home Crime Puttur: ಪುತ್ತೂರು: ಮಾದಕವಸ್ತು ಮಾರಾಟ ಮಾಡುತ್ತಿದ್ದ ವ್ಯಕ್ತಿ ಬಂಧನ

Puttur: ಪುತ್ತೂರು: ಮಾದಕವಸ್ತು ಮಾರಾಟ ಮಾಡುತ್ತಿದ್ದ ವ್ಯಕ್ತಿ ಬಂಧನ

Hindu neighbor gifts plot of land

Hindu neighbour gifts land to Muslim journalist

Puttur: ಕಬಕ ಗ್ರಾಮದ ಮುರದಲ್ಲಿರುವ ರೈಲ್ವೆ ಸೇತುವೆ ಬಳಿ ಮಾದಕವಸ್ತು ಮಾರಾಟಕ್ಕೆ ಯತ್ನಿಸುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿ ಆತನಿಂದ 10 ಗ್ರಾಂ ಎಂಡಿಎಂಎ ನಿಷೇಧಿತ ಮಾದಕವಸ್ತು ವಶಕ್ಕೆ ಪಡೆದಿದ್ದಾರೆ.

ಶಂಕಿತನನ್ನು ಪುತ್ತೂರು ಕಬಕ ನಿವಾಸಿ ಉಮ್ಮರ್ ಫಾರೂಕ್ (41) ಎಂದು ಗುರುತಿಸಲಾಗಿದ್ದು, ಆತನ ವಿರುದ್ಧ ನಗರ ಪೊಲೀಸ್‌ ಠಾಣೆಯಲ್ಲಿ ಎನ್‌ಡಿಪಿಎಸ್‌ ಕಾಯ್ದೆಯ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ರೈಲ್ವೆ ಸೇತುವೆ ಬಳಿ ವ್ಯಕ್ತಿಯೋರ್ವ ಮಾದಕವಸ್ತು ಮಾರಾಟಕ್ಕೆ ಯತ್ನಿಸುತ್ತಿದ್ದ ಎಂಬ ನಿಖರ ಮಾಹಿತಿಯ ಮೇರೆಗೆ ಪುತ್ತೂರು ನಗರ ಪೊಲೀಸ್‌ ಠಾಣೆಯ ಉಪನಿರೀಕ್ಷಕ ಆಂಜನೇಯ ರೆಡ್ಡಿ ಮತ್ತು ಸಿಬ್ಬಂದಿ ದಾಳಿ ನಡೆಸಿದ್ದಾರೆ. ಘಟನಾ ಸ್ಥಳದಲ್ಲಿ ಶಂಕಿತನನ್ನು ವಶಕ್ಕೆ ಪಡೆದು ವಿಚಾರಿಸಿದಾಗ ಹಾಗೂ ಆತನ ದ್ವಿಚಕ್ರ ವಾಹನವನ್ನು ಪರಿಶೀಲಿಸಿದಾಗ ಮಾರಾಟ ಉದ್ದೇಶಕ್ಕಾಗಿ ಅಕ್ರಮವಾಗಿ ಇರಿಸಿದ್ದ ಮಾದಕ ವಸ್ತು ಪತ್ತೆಯಾಗಿದೆ. ಪ್ರಾಥಮಿಕ ವಿಚಾರಣೆ ವೇಳೆ ಆರೋಪಿಯ ವಿರುದ್ಧ ಜಿಲ್ಲೆಯಲ್ಲಿ ವಿವಿಧ ಪೊಲೀಸ್‌ ಠಾಣೆಗಳಲ್ಲಿ ಈಗಾಗಲೇ 6 ಬೇರೆ ಪ್ರಕರಣಗಳು ದಾಖಲಾಗಿರುವುದು ತಿಳಿದು ಬಂದಿದೆ..