ಸೋಮವಾರ, 26 ಅಕ್ಟೋಬರ್ 2026
Trending

ಮಂಗಳೂರು: ಕಾಲೇಜು ವಿದ್ಯಾರ್ಥಿಗಳ ನಡುವೆ ಜಗಳ

ಮಂಗಳೂರು: ರಾಜ್ಯ ಬಜೆಟ್‌ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿದ್ಯಾರ್ಥಿ ಸಂಘದ ಚುನಾವಣೆ ಘೋಷಣೆ ಮಾಡಿದ್ದು, ಇದು ಇನ್ನೂ ಅಧಿಕೃತವಾಗಿ ಜಾರಿಗೆ ಬಂದಿಲ್ಲ. ಆದರೆ ಮಂಗಳೂರಿನ ಪ್ರತಿಷ್ಠಿತ ಹಂಪನಕಟ್ಟೆ ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ಗಲಾಟೆ ನಡೆದಿದೆ. ಕಾಂಗ್ರೆಸ್‌ ಬೆಂಬಲಿತ NSUI ಮತ್ತು ಬಿಜೆಪಿ ಬೆಂಬಲಿತ ABVP ಕಾರ್ಯಕರ್ತರ ನಡುವಿನ ಜಿದ್ದಾಜಿದ್ದಿನಿಂದ ಕಾಲೇಜು ಆವರಣದಲ್ಲಿ ಜಗಳ ಪ್ರಾರಂಭವಾಗಿದೆ.

Sponsored

NSUI ಕಾರ್ಯಕರ್ತರು ಕಾಲೇಜು ಕ್ಯಾಂಪಸ್‌ ಒಳಗಡೆ ಚುನಾವಣೆ ಘೋಷಣೆ ಮತ್ತು ವಿದ್ಯಾರ್ಥಿ ಇಂದಿರಾ ಕ್ಯಾಂಟೀನ್‌ ಘೋಷಣೆಯನ್ನು ಸ್ವಾಗತ ಮಾಡಿ ಪಟಾಕಿ ಸಿಡಿಸಿ ಸಂಭ್ರಮ ಮಾಡಿದ್ದಾರೆ. ಅಷ್ಟು ಮಾತ್ರವಲ್ಲದೇ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ ಪರ ಘೋಷಣೆ ಕೂಗಿದ್ದಾರೆ. ಇದನ್ನು ABVP ಶೈಕ್ಷಣಿಕ ಕೇಂದ್ರದಲ್ಲಿ ರಾಜಕೀಯ ಅಟ್ಟಹಾಸ ಎಂದು ತನ್ನ ಆಕ್ರೋಶ ವ್ಯಕ್ತಪಡಿಸಿದೆ.

Advertisement
Advertisement

ಕಾಲೇಜನ್ನು ರಾಜಕೀಯಕ್ಕೆ ಬಳಸಿಕೊಂಡಿದ್ದಾರೆ ಎಂದು ಆರೋಪ ಮಾಡಿ ಎಬಿವಿಪಿ ವಿದ್ಯಾರ್ಥಿಗಳು ಕಾಲೇಜಿನ ಮುಂಭಾಗ ರಸ್ತೆ ತಡೆ ನಡೆಸಿದರು. ರಾಜಕೀಯ ಘೋಷಣೆ ಕೂಗಲು ಅವಕಾಶ ನೀಡಿದ ಪ್ರಾಂಶುಪಾಲ ಗಣಪತಿ ಗೌಡ ಅವರ ವಿರುದ್ಧ ಧಿಕ್ಕಾರ ಕೂಗಿದ್ದಾರೆ.

ಸಿಹಿ ಹಂಚಲು ಮಾತ್ರ ಅನುಮತಿ ನೀಡಿದ್ದು, ಘೋಷಣೆ ಕೂಗಿದ್ದು ಗಮನಕ್ಕೆ ಬಂದಿಲ್ಲ ಎಂದು ಪ್ರಾಂಶುಪಾಲರ ಹೇಳಿಕೆ ವಿದ್ಯಾರ್ಥಿಗಳ ಕೆಂಗಣ್ಣಿಗೆ ಗುರಿಯಾಗಿದೆ. ಈ ಕುರಿತು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿಗಳಿಗೆ ವರದಿ ನೀಡುವುದಾಗಿ ಪ್ರಾಂಶುಪಾಲರು ಭರವಸೆ ನೀಡಿದ್ದಾರೆ.

Advertisement