ಶನಿವಾರ, 24 ಅಕ್ಟೋಬರ್ 2026

ಮಂಗಳೂರು: ಕೇರಳ ಲಾಟರಿಯಲ್ಲಿ ಬಹುಮಾನ ಬಂದಿದೆ ಎಂದು ಲಕ್ಷ ಲಕ್ಷ ವಂಚನೆ

Uppinangady

ಮಂಗಳೂರು: ಕೇರಳ ಲಾಟರಿಯಲ್ಲಿ ಎಂಟು ಲಕ್ಷ ರೂ ಬಂದಿದೆ ಎಂದು ಹೇಳಿ, ಅದನ್ನು ಪಡೆಯಲು ತೆರಿಗೆ ಹಣ ಕಟ್ಟಬೇಕು ಎಂದು ನಂಬಿಸಿ ಅಪರಿಚಿತರು 3.81 ಲಕ್ಷ ರೂ. ಹಣ ವರ್ಗಾಯಿಸಲು ತಿಳಿಸಿ ವಂಚನೆ ಮಾಡಿರುವ ಕುರಿತು ಸೆನ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

42 ವರ್ಷದ ದೂರುದಾರರಿಗೆ ಆ.14 ರಂದು ಅಪರಿಚಿತ ಸಂಖ್ಯೆಯಿಂದ ಕರೆ ಬಂದಿದ್ದು, ಕರೆ ಮಾಡಿದ ವ್ಯಕ್ತಿ ಕೇರಳ ಲಾಟರಿಯಲ್ಲಿ ಎಂಟು ಲಕ್ಷ ರೂ. ಬಂದಿದೆ ಎಂದು ನಂಬಿಸಿ ಹಣವನ್ನು ಪಡೆಯಲು ತೆರಿಗೆ ಕಟ್ಟಬೇಕು ಎಂದು ತಿಳಿಸಿದ್ದಾನೆ.

ಇದನ್ನು ನಂಬಿದ ವ್ಯಕ್ತಿ ಅಪರಿಚಿತ ಕಳುಹಿಸಿದ ಗೂಗಲ್‌ ಪೇ, ಫೋನ್‌ ಪೇ ಸ್ಕ್ಯಾನ್‌ ಮಾಡಿ ಆ.15 ರಿಂದ 26 ರ ವರೆಗೆ ಹಂತ ಹಂತವಾಗಿ 3,81,300 ರೂ. ವರ್ಗಾವಣೆ ಮಾಡಿದ್ದಾರೆ. ಮತ್ತೆ ಕರೆ ಮಾಡಿದ ಅಪರಿಚಿತ ವ್ಯಕ್ತಿ ಲಾಟರಿ ಹಣ ಡಬಲ್‌ ಆಗಿದ್ದು, ಪುನಃ ಟ್ಯಾಕ್ಸ್‌ ಕಟ್ಟಬೇಕು ಎಂದು ಒತ್ತಾಯ ಮಾಡಿದ್ದಾನೆ. ಇದನ್ನು ಕೇಳಿದ ದೂರುದಾರರಿಗೆ ಅದೊಂದು ಮೋಸದ ಜಾಲ ಎಂದು ಗೊತ್ತಾಗಿ ಸೈಬರ್‌ ಹೆಲ್ಪ್‌ಲೈನ್‌ಗೆ ಕರೆ ಮಾಡಿ ದೂರು ದಾಖಲು ಮಾಡಿದ್ದಾರೆ.