ಸೋಮವಾರ, 26 ಅಕ್ಟೋಬರ್ 2026
Trending

ಮಂಗಳೂರು: ನರ್ಸ್‌ಗೆ ಜೀವ ಬೆದರಿಕೆ ಹಾಕಿದ್‌ ನೌಶಾದ್‌, ವಿಹೆಚ್‌ಪಿ ಮೊರೆ ಹೋದ ಯುವತಿ

Image Credit: Tv9 Kannada

ಮಂಗಳೂರು, ಆ.28: ಮಂಗಳೂರಿನಲ್ಲಿ ಯುವತಿಯೊಬ್ಬಳು ತನ್ನ ಮೇಲೆ ದೌರ್ಜನ್ಯವೆಸಗಿದವರ ವಿರುದ್ಧ ಪೊಲೀಸ್‌ ಠಾಣೆಯಲ್ಲಿ ದೂರನ್ನು ನೀಡಿದ್ದಾಳೆ. ಈ ಕಾರಣಕ್ಕೆ ಆಕೆಯ ಮೇಲೆ ಆರೋಪಿ ಕೊಲೆ ಬೆದರಿಕೆ ಹಾಕಿದ್ದು, ಅಲ್ಲದೇ ಯುವತಿಯ ಸ್ನೇಹಿತೆಯರ ಮೇಲೂ ಹಲ್ಲೆ ಮಾಡಿದ್ದಾನೆ.

Sponsored

ಪುತ್ತೂರು ಮೂಲದ ನರ್ಸ್‌ ನಂದಿನಿ ಎಂಬಾಕೆ ಮಂಗಳೂರಿನ ನೀರುಮಾರ್ಗದಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದರು. ಕಳೆದ ಆ.16 ರಂದು ನಂದಿನಿ ಮೈಸೂರಿಗೆ ತೆರಳುವಾಗ, ತಮ್ಮ ಮನೆಯಲ್ಲಿದ್ದ ನಾಯಿಗೆ ಊಟ ಹಾಕಲು ಕೀಯನ್ನು ಸ್ನೇಹಿತೆ ಚಂದನಾಗೆ ನೀಡಿದ್ದರು. ಆ.17 ರಂದು ಚಂದನಾ ತನ್ನ ಇನ್ನೋರ್ವ ಸ್ನೇಹಿತೆ, ಕೇರಳ ಮೂಲದ ನರ್ಸ್‌ ಆದಿತ್ಯಾ ಜೊತೆ ನಂದಿನಿ ಮನೆಗೆ ತೆರಳಿದ್ದರು.

ಆದಿತ್ಯಾ ನೀಡಿದ ಮಾಹಿತಿ ಆಧರಿಸಿ ಅಲ್ಲಿಗೆ ಬಂದ ನೌಶದ್‌, ಮನೆಗೆ ಅಕ್ರಮ ಪ್ರವೇಶ ಮಾಡಿ ಚಂದನಾ ಮತ್ತು ಆದಿತ್ಯಾಗೆ ಅಶ್ಲೀಲವಾಗಿ ನಿಂದನೆ ಮಾಡಿ ಗಲಾಟೆ ಮಾಡಿದ್ದು, ಈ ವಿಷಯ ತಿಳಿದು ನಂದಿನಿ ಕರೆ ಮಾಡಿದಾಗ, ಫೋನ್‌ ಸ್ವೀಕರಿಸದ ನೌಶಾದ್‌ ನಂದಿನಿಗೂ ಅಶ್ಲೀಲವಾಗಿ ಬೈದು ಜೀವ ಬೆದರಿಕೆ ಹಾಕಿದ್ದಾನೆ.

ಆರೋಪಿ ನೌಶದ್‌ ವಿರುದ್ಧ ನಂದಿನಿ ಮಂಗಳೂರು ಮಹಿಳಾ ಠಾಣೆಗೆ ದೂರನ್ನು ನೀಡಿದ್ದರು. ದೂರು ನೀಡಿದ ವಿಷಯ ತಿಳಿಯುತ್ತಿದ್ದಂತೆಯೇ ನೌಶಾದ್‌, ವಾಟ್ಸಪ್‌ನಲ್ಲಿ ವಾಯ್ಸ್‌ ಮೆಸೇಜ್‌ ಕಳುಹಿಸಿ, ನನಗೆ ಯಾವುದಕ್ಕೂ ಹೆದರಿಕೆ ಇಲ್ಲ. ಪೊಲೀಸರಿಗೆ ಶರಣಾಗೋದಕ್ಕಿಂತ ಮೊದಲು ನಿನ್ನ ತಲೆ ತೆಗಿತೀನಿ, ಕೊಲ್ಲದೇ ಬಿಡುವುದಿಲ್ಲ ಎಂದು ಬಹಿರಂಗವಾಗಿಯೇ ಬೆದರಿಕೆ ಹಾಕಿದ್ದ. ಇದರಿಂದ ನಂದಿನಿ ಭಯಗೊಂಡಿದ್ದು, ಆ.20 ರಂದು ಮಂಗಳೂರು ಗ್ರಾಮಾಂತರ ಠಾಣೆಗೆ ದೂರನ್ನು ನೀಡಿದ್ದಳು.

ದೂರು ನೀಡಿ 10 ದಿನಗಳಾದರೂ ಪೊಲೀಸರು ಆರೋಪಿ ನೌಶಾದ್‌ ಮೇಲೆ ಯಾವುದೇ ಕ್ರಮ ಕೈಗೊಳ್ಳಲಿಲ್ಲ ಎನ್ನುವ ಆರೋಪ ಕೇಳಿ ಬಂದಿದೆ. ಇದರಿಂದ ಭಯಗೊಂಡ ನಂದಿನಿ ರಕ್ಷಣೆ ಕೋರಿ ವಿಶ್ವ ಹಿಂದೂ ಪರಿಷತ್‌ ಮತ್ತು ದುರ್ಗಾವಾಹಿನಿ ಮುಖಂಡರನ್ನು ಸಂಪರ್ಕ ಮಾಡಿದ್ದಾಳೆ.

ಈ ವೇಳೆ ಇನ್ನೋರ್ವ ನರ್ಸ್‌ ಆದಿತ್ಯಾಳನ್ನು ವಿಎಚ್‌ಪಿ ಮುಖಂಡರು ಸಂಪರ್ಕ ಮಾಡಿದ್ದು, ನೌಶಾದ್‌ ಬಳಿ ನನ್ನ ಫೋಟೋ, ವಿಡಿಯೋಗಳಿದೆ ಎಂದು ಹೇಳಿದ್ದಾಳೆ. ಈ ಮೂಲಕ ನೌಶಾದ್‌ ಆಕೆಯ ಫೋಟೋ ವಿಡಿಯೋ ಹಿಡಿದುಕೊಂಡು ಬ್ಲಾಕ್‌ಮೇಲ್‌ ಮಾಡುತ್ತಿದ್ದಾನಾ? ಎನ್ನುವ ಅನುಮಾನ ಉಂಟಾಗಿದೆ.

ಇನ್ನು ಪ್ರಕರಣ ದಾಖಲಾಗುತ್ತಿದ್ದಂತೆ ಆಸ್ಪತ್ರೆ ಆಡಳಿತ ಮಂಡಳಿ ನಂದಿನಿ, ಆದಿತ್ಯಾ ಇಬ್ಬರನ್ನೂ ಕೆಲಸದಿಂದ ವಜಾ ಮಾಡಿ ಆದೇಶಗೊಳಿಸಿದೆ.

ಆರೋಪಿ ಬಂಧನ ವಿಳಂಬದ ಬಗ್ಗೆ ಸಾರ್ವಜನಿಕರು ಹಾಗೂ ಹಿಂದೂ ಸಂಘಟನೆಗಳಿಂದ ತೀವ್ರ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ, ಮಂಗಳೂರು ನಗರ ಪೊಲೀಸ್ ಕಮಿಷನರ್ ಸುಧೀರ್ ರೆಡ್ಡಿ ಸ್ಪಷ್ಟನೆ ನೀಡಿದ್ದಾರೆ.

“ನಮಗೂ ಆರೋಪಿಯನ್ನು ಬಂಧಿಸುವ ಉದ್ದೇಶವೇ ಇದೆ. ಈ ಪ್ರಕರಣದಲ್ಲಿ ಯಾವುದೇ ವಿನಾಯಿತಿ ನೀಡಲಾಗಿಲ್ಲ. ಆದರೆ ಇದು ದೂರವಾಣಿ ಮೂಲಕ ಬೆದರಿಕೆ ಹಾಕಿದ ಪ್ರಕರಣವಾಗಿದೆ. ಕಾನೂನಿನಲ್ಲಿ ಈ ಅಪರಾಧಕ್ಕೆ ನಿಗದಿಪಡಿಸಿರುವ ಶಿಕ್ಷೆಯ ಮಿತಿ ನಿರ್ದಿಷ್ಟ ಮಟ್ಟಕ್ಕಿಂತ ಕಡಿಮೆಯಿರುವುದರಿಂದ ತಕ್ಷಣ ಬಂಧಿಸಲು ಕಾನೂನಿನಲ್ಲಿ ಅವಕಾಶವಿರುವುದಿಲ್ಲ ಎಂದು ಕಮಿಷನರ್ ತಿಳಿಸಿದ್ದಾರೆ ಎಂದು ಟಿವಿ9 ವರದಿ  ಮಾಡಿದೆ. 

ಪೊಲೀಸ್ ಕಮಿಷನರ್‌ ಸ್ಪಷ್ಟನೆ ಬೆನ್ನಲ್ಲೇ, ಆರೋಪಿ ನೌಶದ್ ನ್ಯಾಯಾಲಯಕ್ಕೆ ಹಾಜರಾಗಿ ಜಾಮೀನು ಪಡೆದಿದ್ದಾನೆ.