ಮಂಗಳೂರು: ಖಾಸಗಿ ಕಾಲೇಜಿನ ವಿದ್ಯಾರ್ಥಿನಿಯೊಬ್ಬನಿಗೆ ವಿದ್ಯಾರ್ಥಿಗಳ ಗುಂಪೊಂದು ಹಲ್ಲೆ ಮಾಡಿ, ಚೂರಿಯಿಂದ ಇರಿದ ಘಟನೆ ಶನಿವಾರ ಮಧ್ಯಾಹ್ನ ನಡೆದಿದೆ. ಘಟನೆಗೆ ಕುರಿತಂತೆ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ.


ಮಿತ್ತಬಾಗಿಲು ನಿವಾಸಿ, ಅಂತಿಮ ವರ್ಷದ ಬಿಸಿಎ ವಿದ್ಯಾರ್ಥಿ ಮಹಮ್ಮದ್ ಉನೈಸ್ (20) ಚೂರಿ ಇರಿತಗೊಂಡ ವಿದ್ಯಾರ್ಥಿ. ಮೊದಲ ವರ್ಷದ ಬಿಕಾಂ ವಿದ್ಯಾರ್ಥಿ ಕಾಟಿಪಳ್ಳದ ರಿಯಾನ್ ಮತ್ತು ಇತರ ಐವರ ವಿರುದ್ಧ ಬರ್ಕೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ರಾಯಿಝ್ ಮತ್ತು ರಿಯಾನ್ ನಡುವೆ ಜಗಳವಾಗಿದ್ದು, ಉನೈಸ್ ಮತ್ತು ಇತರ ವಿದ್ಯಾರ್ಥಿಗಳು ಜಗಳ ಬಿಡಿಸಿದ್ದರು. ಮಧ್ಯಾಹ್ನದ ಸಮಯದಲ್ಲಿ ರಿಯಾನ್ ಇತರ ವಿದ್ಯಾರ್ಥಿಗಳ ಜೊತೆ ದ್ವಿಚಕ್ರ ವಾಹನದಲ್ಲಿ ಬಂದು ಹಲ್ಲೆ ಮಾಡಿದ್ದಾರೆ. ತಲೆ, ಬೆನ್ನು, ಕಿವಿ ಹಾಗೂ ದೇಹದ ಇತರ ಭಾಗಗಳಿಗೆ ಚುಚ್ಚಲಾಗಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.
ಗಾಯಗೊಂಡ ವಿದ್ಯಾರ್ಥಿ ಉನೈಸ್ ವೆನ್ಲಾಕ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಘಟನೆಗೆ ಕುರಿತಂತೆ ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿರುವ ಕುರಿತು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.

