ಶನಿವಾರ, 24 ಅಕ್ಟೋಬರ್ 2026

ಮಂಗಳೂರು: 9 ರ ಹರೆಯದ ಬಾಲಕನಿಗೆ ಅಶ್ಲೀಲ ವಿಡಿಯೋ ತೋರಿಸಿ ಲೈಂಗಿಕ ಕಿರುಕುಳ ಪ್ರಕರಣ

ಉಳ್ಳಾಲ ಮಾ.19: 9 ವರ್ಷದ ಅಪ್ರಾಪ್ತ ಬಾಲಕನನ್ನು ಹಣ ಹಾಗೂ ತಿಂಡಿ ನೀಡುವ ನೆಪದಲ್ಲಿ ಪುಸಲಾಯಿಸಿ ಅಶ್ಲೀಲ ವಿಡಿಯೋ ತೋರಿಸಿ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿಯನ್ನು ಕೊಣಾಜೆ ಪೊಲೀಸರು ಪೋಕ್ಸೋ ಪ್ರಕರಣದಡಿ ಬಂಧನ ಮಾಡಿ, ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

ಬಂಧಿತ ಆರೋಪಿಯನ್ನು ಕೋಟೆಕಾರು ಗ್ರಾಮದ ಮಡ್ಯಾರ್‌ ನಿವಾಸಿ ಆಶೀಶ್‌ ಪೂಜಾರಿ (33) ಎಂದು ಗುರುತಿಸಲಾಗಿದೆ. ಆರೋಪಿ ಸಂತ್ರಸ್ತ ಬಾಲಕನಿಗೆ ಅಶ್ಲೀಲ ವಿಡಿಯೋ ತೋರಿಸಿ ಲೈಂಗಿಕ ಕ್ರಿಯೆಗೆ ಪ್ರೇರಪಿಸಿರುವುದಾಗಿ ಆರೋಪವಿದೆ.

ಈ ಕುರಿತು ಕೊಣಾಜೆ ಪೊಲೀಸರು ಪೋಕ್ಸೋ ಪ್ರಕರಣ ದಾಖಲು ಮಾಡಿ ಆರೋಪಿಯನ್ನು ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಕೊಣಾಜೆ ಪೊಲೀಸ್‌ ಠಾಣೆಯಲ್ಲಿ ವಿವಿಧ ಪ್ರಕರಣಗಳ ಅಡಿಯಲ್ಲಿ ಕೇಸು ದಾಖಲು ಮಾಡಲಾಗಿದೆ.