ಭಾನುವಾರ, 25 ಅಕ್ಟೋಬರ್ 2026
Trending

ಮಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದಕ ಪೋಸ್ಟ್‌ ಹಾಕಿದ ಆರೋಪಿ ಬಂಧನ

ಮಂಗಳೂರು ಮಾರ್ಚ್‌ 26: ಮಂಗಳೂರು ನಗರದಲ್ಲಿ ಕಳೆದ ವರ್ಷ ಸುಹಾಸ್‌ ಶೆಟ್ಟಿ ಕೊ*ಲೆ ನಡೆದಿದ್ದು, ನಂತರ ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನೆ ಮಾಡುವಂತಹ ಪೋಸ್ಟ್‌ಗಳನ್ನು ಹಂಚಿಕೊಂಡು ಪ್ರಚಾರ ಮಾಡಿದ ಕುರಿತು ಪ್ರಕರಣ ದಾಖಲಾಗಿದ್ದು, ಕಂಕನಾಡಿ ಪೊಲೀಸರು ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಮೂಲದ ಯುವಕನೋರ್ವನನ್ನು ಬಂಧನ ಮಾಡಿದ್ದಾರೆ.

Sponsored

ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಮೂಡುಬೆಳ್ಳೆ ಗ್ರಾಮದ ಪವನ್‌ ಆಚಾರ್ಯ (22) ಎಂದು ಗುರುತಿಸಲಾಗಿದೆ. TN MADDY ಎನ್ನುವ ಖಾತೆಯಿಂದ ಕೋಮು ಪ್ರಚೋದಕ ಪೋಸ್ಟ್‌ಗಳನ್ನು ಹಾಕಿದ ಕುರಿತು ಕಂಕನಾಡಿ ನಗರ ಪೊಲೀಸ್‌ ಠಾಣೆಯಲ್ಲಿ ಬಿಎನ್‌ಎಸ್‌ 2023 ರಂತೆ ಪ್ರಕರಣ ದಾಖಲಾಗಿತ್ತು.

ಮಾ.25 ರಂದು ಆರೋಪಿಯನ್ನು ಕಂಕನಾಡಿ ನಗರ ಪೊಲೀಸರು ದಸ್ತಗಿರಿ ಮಾಡಿದ್ದು, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯವು ಆರೋಪಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.