Home Crime Mangaluru: ಡಾಕ್ಟರ್ ನಿರ್ಲಕ್ಷ್ಯ, ಕಾಸ್ಮೆಟಿಕ್ ಸರ್ಜರಿಗೆ ತೆರಳಿದ್ದ ಯುವಕ ಸಾವು !!

Mangaluru: ಡಾಕ್ಟರ್ ನಿರ್ಲಕ್ಷ್ಯ, ಕಾಸ್ಮೆಟಿಕ್ ಸರ್ಜರಿಗೆ ತೆರಳಿದ್ದ ಯುವಕ ಸಾವು !!

Hindu neighbor gifts plot of land

Hindu neighbour gifts land to Muslim journalist

Mangaluru: ಕಾಸ್ಮೆಟಿಕ್ ಸರ್ಜರಿಗೆ(Sosmetic Surgery) ತೆರಳಿದ್ದ ವಿವಾಹಿತ ಯುವಕನೊಬ್ಬ ಮೃತಪಟ್ಟಿರುವ ಘಟನೆ ಮಂಗಳೂರಿನ ಕಂಕನಾಡಿಯ ಬೆಂದೂರ್ ವೆಲ್​ನಲ್ಲಿ ನಡೆದಿದೆ. ಇದರಕ್ಕೆ ವೈದ್ಯರ ನಿರ್ಲಕ್ಷ್ಯವೇ ಇದಕ್ಕೆ ಕಾರಣ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.

ಉಳ್ಳಾಲದ ಅಕ್ಕರೆಕೆರೆ ನಿವಾಸಿಯಾದ ಮೊಹಮ್ಮದ್ ಮಾಝಿನ್(Mohammad Majin), ತನ್ನ‌ ಎದೆಯ ಎಡಭಾಗದ ಸಣ್ಣ ಗುಳ್ಳೆಯನ್ನು ತೆಗೆಸಲು ಬೆಂದೂರ್ ವೆಲ್​ನಲ್ಲಿರುವ ಫ್ಲೋಂಟ್ ಕಾಸ್ಮೆಟಿಕ್ ಸರ್ಜರಿ ಮತ್ತು ಹೇರ್ ಟ್ರಾನ್ಸ್ ಪರೆಂಟ್ ಕ್ಲಿನಿಕ್​ಗೆ ಬಂದಿದ್ದ. ಅರ್ಧ ಗಂಟೆಯಲ್ಲಿ ಮುಗಿಯಬಹುದಾಗಿದ್ದ ಸಣ್ಣ ಶಸ್ತ್ರಚಿಕಿತ್ಸೆ, ಸಂಜೆಯಾದರೂ ಮುಗಿಯದ ಹಿನ್ನೆಲೆ ಅನುಮಾನಗೊಂಡ ಮಾಝಿನ್ ಮನೆಯವರು, ಸಂಶಯಗೊಂಡು‌ ವಿಚಾರಿಸಿದಾಗ ಆರೋಗ್ಯದಲ್ಲಿ ಏರುಪೇರು ಆಗಿರುವ ಮಾಹಿತಿ ಬೆಳಕಿಗೆ ಬಂದಿದೆ. ತಕ್ಷಣ ಸ್ಥಳೀಯ ಖಾಸಗಿ ಆಸ್ಪತ್ರೆಗೆ ಮಾಝಿನ್ ಅವರನ್ನು ದಾಖಲು ಮಾಡಲಾಗಿದೆ. ಬಳಿಕ ಪರೀಕ್ಷಿಸಿದ ವೈದ್ಯರು ಮಾಝಿನ್ ಮೃತಪಟ್ಟಿರುವ ಬಗ್ಗೆ ತಿಳಿಸಿದ್ದಾರೆ.

ಅಂದಹಾಗೆ ಸರ್ಜರಿಯ ವೇಳೆ ವೈದ್ಯರು ಎಡವಟ್ಟು ಮಾಡಿಕೊಂಡಿರುವುದಾಗಿ ಕುಟುಂಬಸ್ಥರು ಆರೋಪಿಸಿದ್ದು, ಈ ಕುರಿತು ಕದ್ರಿ‌ ಠಾಣೆ ಪೊಲೀಸರು ಯು.ಡಿ.ಆರ್ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಕಾಸ್ಮೆಟಿಕ್ ಸರ್ಜರಿ ಅಂದ್ರೆ ಏನು?
ಕಾಸ್ಮೆಟಿಕ್ ಸರ್ಜರಿ ಅಥವಾ ಸೌಂದರ್ಯದ ಶಸ್ತ್ರಚಿಕಿತ್ಸೆ ಎಂದು ಕರೆಯಲಾಗುತ್ತದೆ. ಶಸ್ತ್ರಚಿಕಿತ್ಸಾ ಮತ್ತು ವೈದ್ಯಕೀಯ ತಂತ್ರಗಳ ಮೂಲಕ ವ್ಯಕ್ತಿಯ ಸೌಂದರ್ಯವನ್ನು ಹೆಚ್ಚಿಸುವುದಾಗಿದೆ. ಇದರಿಂದ ಮುಖವು ಯೌವನ ಅಂದರೆ ವಯಸ್ಸಾದಂತೆ ಕಾಣುವುದನ್ನು ತಪ್ಪಿಸಬಹುದಾಗಿದೆ. ಹೆಚ್ಚಾಗಿ ಸೌಂದರ್ಯದ ಮೇಲೆ ಆಸಕ್ತಿ ಇದ್ದವರು ಇದನ್ನು ಮಾಡಿಸಿಕೊಳ್ಳುತ್ತಾರೆ.