Home Crime ಮಂಗಳೂರು: ನಡೆದುಕೊಂಡು ಹೋಗುತ್ತಿದ್ದ ಮಹಿಳೆಯ ಕರಿಮಣಿ ಸರ ಕಳ್ಳತನ: ಬಂಟ್ವಾಳದ ಝೋಮೆಟೋ ಉದ್ಯೋಗಿ ಬಂಧನ

ಮಂಗಳೂರು: ನಡೆದುಕೊಂಡು ಹೋಗುತ್ತಿದ್ದ ಮಹಿಳೆಯ ಕರಿಮಣಿ ಸರ ಕಳ್ಳತನ: ಬಂಟ್ವಾಳದ ಝೋಮೆಟೋ ಉದ್ಯೋಗಿ ಬಂಧನ

Crime

Hindu neighbor gifts plot of land

Hindu neighbour gifts land to Muslim journalist

ಮಂಗಳೂರು: ನಗರದ ಯೆಯ್ಯಾಡಿ ಕೊಪ್ಪಳಕಾಡು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯ ಚಿನ್ನದ ಕರಿಮಣಿ ಸರ ಸುಲಿಗೆ ಮಾಡಿದ ಆರೋಪಿಯನ್ನು ಕದ್ರಿ ಪೊಲೀಸರು ಬಂಧನ ಮಾಡಿದ್ದಾರೆ.

ಡಿ.25 ರಂದು ಸಂಜೆ 6.30 ಕ್ಕೆ ಗುರುನಗರ ನಿವಾಸಿಯಾದ ಮಹಿಳೆಯೊಬ್ಬರು ತಮ್ಮ ಮಗಳ ಜೊತೆ ಅಂಗಡಿಯಿಂದ ಮನೆಯ ಕಡೆಗೆ ಶಂಕರಭವನ ಹೋಟೆಲ್‌ ಬಳಿಯ ಕೊಪ್ಪಳಕಾಡು ರಸ್ತೆಯಲ್ಲಿ ನಡೆದುಕೊಂಡು ಹೋಗುವ ಸಂದರ್ಭದಲ್ಲಿ ಓರ್ವ ಅಪರಿಚಿತ ವ್ಯಕ್ತಿ ಹಿಂದಿನಿಂದ ಬಂದು ಮಹಿಳೆಯ ಕುತ್ತಿಗೆಯಲ್ಲಿದ್ದ 32 ಗ್ರಾಂ ತೂಕದ ಚಿನ್ನದ ಕರಿಮಣಿ ಸರವನ್ನು ಕಸಿದು ಓಡಿ ಹೋಗಿರುತ್ತಾನೆ. ಈ ಕುರಿತು ಮಂಗಳೂರು ಗ್ರಾಮಾಂತರ ಠಾಣೆಯಲ್ಲಿ 128/2025 ಕಲಂ: 304 (2) ಭಾರತೀಯ ನ್ಯಾಯ ಸಂಹಿತೆ 2023 ರಂತೆ ಪ್ರಕರಣ ದಾಖಲು ಮಾಡಲಾಗಿದೆ.

ತನಿಖೆಯ ಸಂದರ್ಭ ಆರೋಪಿ ಸ್ವಿಗ್ಗಿ ಮತ್ತು ಝೊಮೆಟೋ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದು, ಇತ್ತೀಚೆಗೆ ಸ್ಕೂಟರ್‌ ಖರೀದಿ ಮಾಡಿದ್ದು, ಇತರ ವಿಚಾರಗಳಿಗೆ ಲಕ್ಷಾಂತರ ರೂಪಾಯಿಗಳ ಸಾಲ ಮಾಡಿದ್ದು, ಸಾಲವನ್ನು ತೀರಿಸಲು ಈ ಕೃತ್ಯ ಮಾಡಿರುವುದು ತನಿಖೆಯಲ್ಲಿ ತಿಳಿದು ಬಂದಿದೆ.

ಆರೋಪಿ ರೋಹಿತ್‌ ಬಿ.ದಾಸ್‌ (24) ಬಂಟ್ವಾಳ ತಾಲೂಕಿನ ಕಕ್ಕೆಪದವು ನಿವಾಸಿಯಾಗಿದ್ದು, ಈತ ಮೊದಲ ಬಾರಿಗೆ ಕೃತ್ಯದಲ್ಲಿ ತೊಗಡಿ ಜೈಲು ಪಾಲಾಗಿದ್ದಾನೆ.