

Meerat: ಉತ್ತರ ಪ್ರದೇಶದ ಖಾಸಗಿ ವಿಶ್ವವಿದ್ಯಾನಿಲಯದ ಮುಕ್ತ ಆವರಣದಲ್ಲಿ ನಮಾಜ್ ಮಾಡಿ, ಜಾಲತಾಣದಲ್ಲಿ ವಿಡಿಯೋ ಅಪ್ಲೋಡ್ ಮಾಡಿದ್ದ ವಿದ್ಯಾರ್ಥಿಯನ್ನು ಪೊಲೀಸರು ಬಂಧಿಸಿದ್ದಾರೆ.
ಖಲೀದ್ ಪ್ರಧಾನ್ ಬಂಧನಕ್ಕೊಳಗಾಗಿರುವ ವಿದ್ಯಾರ್ಥಿ.
ಇಲ್ಲಿನ ಐಐಎಂಟಿ ವಿಶ್ವವಿದ್ಯಾನಿಲಯದ ಹೋಳಿ ಆಚರಣೆಯ ಸಂದರ್ಭದಲ್ಲಿ ವಿದ್ಯಾರ್ಥಿಗಳ ಗುಂಪೊಂದು ಕ್ಯಾಂಪಸ್‌ನಲ್ಲಿ ನಮಾಜ್ ಮಾಡುತ್ತಿರುವ ವಿಡಿಯೋ ಹರಿದಾಡತೊಡಗಿತ್ತು. ಇದನ್ನು ವಿರೋಧಿಸಿ ಹಿಂದೂ ಸಂಘಟನೆಗಳು ಪ್ರತಿಭಟಿಸಿದ್ದವು. ಈ ಬೆನ್ನಲ್ಲೇ ಪೊಲೀಸರು ವಿದ್ಯಾರ್ಥಿಯನ್ನು ಬಂಧಿಸಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಬಂಧಿತ ವಿದ್ಯಾರ್ಥಿ ಪ್ರಧಾನ್ ಮತ್ತು ಮೂವರು ಭದ್ರತಾ ಸಿಬ್ಬಂದಿಯನ್ನು ವಿಶ್ವವಿದ್ಯಾಲಯದ ಆಡಳಿತ ಮಂಡಳಿ ಅಮಾನತುಗೊಳಿಸಿದೆ.













