ಶುಕ್ರವಾರ, 6 ನವೆಂಬರ್ 2026

ತಂದೆ ಹಾಗೂ ಆತನ ಸ್ನೇಹಿತನಿಂದಲೇ ಅಪ್ರಾಪ್ತ ಮಗಳ ಮೇಲೆ 2 ವರ್ಷ ನಿರಂತರ ಅತ್ಯಾಚಾರ

Advertisement
Advertisement

ಕಳೆದ ಎರಡು ವರ್ಷಗಳಿಂದ ತನ್ನ ಅಪ್ರಾಪ್ತ ಮಗಳ ಮೇಲೆ ತಂದೆ ಹಾಗೂ ಆತನ ಸ್ನೇಹಿತ ನಿರಂತರವಾಗಿ ಅತ್ಯಾಚಾರ ಎಸಗುತ್ತಿದ್ದು, ಇದೀಗ ಇಬ್ಬರೂ ಕಾಮುಕರನ್ನು ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ.

Sponsored

ರಾಯಚೂರು ಜಿಲ್ಲೆಯ ಜಿಲ್ಲೆಯ ಲಿಂಗಸುಗೂರು ಪಟ್ಟಣದಲ್ಲಿ ಇದು ಬೆಳಕಿಗೆ ಬಂದಿದೆ. ಸಂತ್ರಸ್ತೆಯ ತಂದೆ ಅಮರೇಶ್ ಹಾಗೂ ಸ್ನೇಹಿತ ಸೀನು ಬಂಧಿತ ಆರೋಪಿಗಳು. ಎರಡು ವರ್ಷಗಳಿಂದ ಅಪ್ರಾಪ್ತೆ ಮೇಲೆ ಇಬ್ಬರು ನಿರಂತರವಾಗಿ ಅತ್ಯಾಚಾರ ಎಸಗಿದ್ದಾರೆ. 

Advertisement
Advertisement

ಬಾಲಕಿಯನ್ನು ರಕ್ಷಿಸಿ ಸಾಂತ್ವಾನ ಕೇಂದ್ರಕ್ಕೆ ಕಳುಹಿಸಲಾಗಿದ್ದು, ಅಲ್ಲಿ ಬಾಲಕಿಯು ತನಗೆ ನಡೆದ ದೌರ್ಜನ್ಯದ ಬಗ್ಗೆ ಮಾಹಿತಿ ನೀಡಿದ್ದಾಳೆ. ಬಾಲಕಿಯ ಹೇಳಿಕೆಯ ಆಧಾರದ ಮೇಲೆ ಲಿಂಗಸುಗೂರು ಪೊಲೀಸ್ ಠಾಣೆಯಲ್ಲಿ ಪೋಕ್ಸೋ (POCSO) ಮತ್ತು ಅಟ್ರಾಸಿಟಿ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಇಬ್ಬರೂ ಆರೋಪಿಗಳನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ರಾಯಚೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣಾಂಗ್ಷು ಗಿರಿ ಅವರು ತಿಳಿಸಿದ್ದಾರೆ.

Advertisement
Advertisement
Advertisement