Home Crime ಮೂಡುಬಿದಿರೆ (ದ.ಕ): ವಿದ್ಯಾರ್ಥಿಗೆ ಲೈಂಗಿಕ ದೌರ್ಜನ್ಯ: ಶಿಕ್ಷಕ ಸೆರೆ

ಮೂಡುಬಿದಿರೆ (ದ.ಕ): ವಿದ್ಯಾರ್ಥಿಗೆ ಲೈಂಗಿಕ ದೌರ್ಜನ್ಯ: ಶಿಕ್ಷಕ ಸೆರೆ

Sringeri Minor Girl Rape Case

Hindu neighbor gifts plot of land

Hindu neighbour gifts land to Muslim journalist

ಮೂಡುಬಿದಿರೆ (ದ.ಕ.): ವಿದ್ಯಾರ್ಥಿಗೆ ವಿಶೇಷ ತರಗತಿಯ ಆಮಿಷವೊಡ್ಡಿ, ನಗ್ನ ವಿಡಿಯೊ ಚಿತ್ರೀಕರಿಸಿ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಶಾಲಾ ಶಿಕ್ಷಕ ಅಲ್ತಾಫ್‌ನನ್ನು ಬಂಧಿಸಿದ್ದಾರೆ.

2023ರಲ್ಲಿ ಸಂತ್ರಸ್ತ ಬಾಲಕ 10ನೇ ತರಗತಿ ವ್ಯಾಸಂಗ ಮಾಡುತ್ತಿದ್ದಾಗ, ಗಣಿತ ವಿಷಯದಲ್ಲಿ ಹೆಚ್ಚು ಅಂಕ ಕೊಡಿಸುವುದಾಗಿ ನಂಬಿಸಿದ ಶಿಕ್ಷಕ ಅಲ್ತಾಫ್, ಬಾಲಕನನ್ನು ಹಳೆ ಮೀನು ಮಾರುಕಟ್ಟೆ ಸಮೀಪವಿದ್ದ ತನ್ನ ಕೊಠಡಿಗೆ ಕರೆಸಿಕೊಂಡಿದ್ದನು. ಅಲ್ಲಿ ಬಾಲಕನಿಗೆ ಮಾದಕ ದ್ರವ್ಯ ಬೆರೆಸಿದ ಜ್ಯೂಸ್ ನೀಡಿ ಅರೆಪ್ರಜ್ಞಾವಸ್ಥೆಗೆ ತಲುಪಿಸಿ, ಆತನ ನಗ್ನ ವಿಡಿಯೊ ಚಿತ್ರೀಕರಿಸಿಕೊಂಡಿದ್ದ. ಇದನ್ನು ತೋರಿಸಿ ಬೆದರಿಕೆ ಹಾಕಿ, ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ವಿರೋಧಿಸಿದಾಗ ಬೆಲ್ಸ್‌ನಿಂದ ಹಲ್ಲೆ ನಡೆಸಿದ್ದ.

ಕಳೆದ ಕೆಲವು ದಿನಗಳಿಂದ ಬಾಲಕನ ಆರೋಗ್ಯದಲ್ಲಿ ವಿರುಪೇರಾದಾಗ ಅನುಮಾನಗೊಂಡ ಪೋಷಕರು ಆಸ್ಪತ್ರೆಗೆ ದಾಖಲಿಸಿದ್ದರು. ವೈದ್ಯರು ಮತ್ತು ಪೋಷಕರ ವಿಚಾರಣೆ ವೇಳೆ ಪ್ರಕರಣ ಬೆಳಕಿಗೆ ಬಂದಿದೆ.