Home » ಗಣೇಶನನ್ನು ತರುವ ಮೆರವಣಿಗೆಯಲ್ಲಿ ಮಹಿಳೆಯರ ಜೊತೆ ಅಸಭ್ಯ ವರ್ತನೆ

ಗಣೇಶನನ್ನು ತರುವ ಮೆರವಣಿಗೆಯಲ್ಲಿ ಮಹಿಳೆಯರ ಜೊತೆ ಅಸಭ್ಯ ವರ್ತನೆ

0 comments

ಗಣಪತಿಯನ್ನು ತರುವಾಗ ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯ ವರ್ತನೆ ಮಾಡಿದ ಪ್ರಕರಣ ಹುಬ್ಬಳ್ಳಿ ನಗರದಲ್ಲಿ ನಡೆದಿದೆ.

ಸೆ.12 ರ ರಾತ್ರಿ 9.30ರ ವೇಳೆಗೆ ಈ ಘಟನೆ ನಡೆದಿದೆ. ಮರಾಠ ಗಲ್ಲಿಯಿಂದ ಸಿಬಿಟಿ ಕಡೆಗೆ ಹೋಗುವ ರಸ್ತೆಯ ಬಳಿ ಮೇದಾರ್‌ ಓಣಿಯ ಗಣಪತಿ ಮತ್ತು ಕಲಾಲ್‌ ಓಣಿಯ ಗಣಪತಿ ಮೆರವಣಿಗೆಗಳು ಮುಖಾಮುಖಿಯಾಗಿದ್ದು, ಈ ವೇಳೆ ಕಲಾಲ್‌ ಓಣಿಯ ಗಣಪತಿ ಡಿಜೆ ಮುಂದೆ ಕೆಲವು ಯುವಕರು ಮಹಿಳೆಯರ ಜೊತೆ ಅಸಭ್ಯ ವರ್ತನೆ ಮಾಡಿದ್ದರು. ಅವರನ್ನು 30 ಸೆಕೆಂಡ್‌ಗಳಿಗಿಂತ ಕಡಿಮೆ ಅವಧಿಯಲ್ಲಿ ಕನಿಷ್ಠ ಬಲಪ್ರಯೋಗ ಮಾಡಿ ಅಲ್ಲಿಂದ ಚದುರಿಸಲಾಯಿತು ಎಂದು ಪೊಲೀಸ್‌ ಕಮಿಷನರ್‌ ಮಾಹಿತಿ ನೀಡಿದ್ದಾರೆ.

You may also like