Home Crime Prajwal Revanna: ಮನೆಕೆಲಸದವಳ ಮೇಲೆ ರೇ*ಪ್‌ ಪ್ರಕರಣ: ಅಪರಾಧಿ ಪ್ರಜ್ವಲ್‌ ರೇವಣ್ಣಗೆ ಶಿಕ್ಷೆ ಪ್ರಮಾಣ ಪ್ರಕಟ

Prajwal Revanna: ಮನೆಕೆಲಸದವಳ ಮೇಲೆ ರೇ*ಪ್‌ ಪ್ರಕರಣ: ಅಪರಾಧಿ ಪ್ರಜ್ವಲ್‌ ರೇವಣ್ಣಗೆ ಶಿಕ್ಷೆ ಪ್ರಮಾಣ ಪ್ರಕಟ

Prajwal Revanna

Hindu neighbor gifts plot of land

Hindu neighbour gifts land to Muslim journalist

Prajwal Revanna: ಕೆ.ಆರ್.ನಗರದ ಮನೆಗೆಲಸದವಳ ಮೇಲಿನ ಅತ್ಯಾ*ಚಾರ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಅವರನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಶುಕ್ರವಾರ ಅಪರಾಧಿ ಎಂದು ತೀರ್ಮಾನಿಸಿ ಮಹತ್ವದ ತೀರ್ಪನ್ನು ನೀಡಿತ್ತು.

ಅಪರಾಧಿ ಪ್ರಜ್ವಲ್‌ಗೆ ಜೀವಾವಧಿ ಶಿಕ್ಷೆಯನ್ನು ನ್ಯಾಯಾಲಯ ಪ್ರಕಟ ಮಾಡಿದೆ. ಅತ್ಯಾಚಾರದ ಎರಡು ಪ್ರಕರಣಗಳಲ್ಲಿ ಹತ್ತು ಲಕ್ಷ ರೂಪಾಯಿ ದಂಡವನ್ನು ಕೋರ್ಟ್‌ ವಿಧಿಸಿದೆ. ಜೀವನಪರ್ಯಂತ ಜೀವಾವಧಿ ಶಿಕ್ಷೆಯನ್ನು ನ್ಯಾಯಾಲಯ ಪ್ರಕಟ ಮಾಡಿದೆ.

ಈ ಮೂಲಕ ಜೀವನ ಪರ್ಯಂತ ಜೈಲಿನಲ್ಲೇ ಇರುವ ಶಿಕ್ಷೆ ಪ್ರಕಟವಾಗಿದೆ. 376(2)(n) ಸೆಕ್ಷನ್ ಗೆ ಜೀವಾವಧಿ. 354 ಗೆ 3 ವರ್ಷ, 354(b) 3 ವರ್ಷ ಕಠಿಣ ಕಾರಗೃಹ, . ಸಂತ್ರಸ್ತಗೆ 11ಲಕ್ಷ ಪರಿಹಾರ ನೀಡುವಂತೆ ಕೋರ್ಟ್ ಆದೇಶ ಹೊರಬಿದ್ದಿದೆ. ಈ ಮೂಲಕ ಪ್ರಜ್ವಲ್ ರೇವಣ್ಣಗೆ ಬಹುದೊಡ್ಡ ಶಿಕ್ಷೆಯಾಗಿದೆ. ಪ್ರಕರಣದಲ್ಲಿ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 376(2)(n) ಮತ್ತು 376(2)(k) ಅಡಿಯಲ್ಲಿ ಆರೋಪಗಳು ದಾಖಲಾಗಿದೆ.

ಈ ಪ್ರಕರಣದಲ್ಲಿ ಪ್ರಜ್ವಲ್‌ ರೇವಣ್ಣ ಬಂಧನವಾಗಿರುವುದಿಲ್ಲ. ಕೇವಲ ಬಾಡಿ ವಾರೆಂಟ್‌ ಮೇಲೆ ಪ್ರಜ್ವಲ್‌ನನ್ನು ವಶಕ್ಕೆ ಪಡೆಯಲಾಗಿತ್ತು.

ಶಿಕ್ಷೆ ಪ್ರಮಾಣ ಪ್ರಕಟ ಮಾಡುವ ಸಂದರ್ಭದಲ್ಲಿ ಕೋರ್ಟ್‌ ಹಾಲ್‌ನಲ್ಲಿ ವಕೀಲರು ಕಿಕ್ಕಿರಿದು ತುಂಬಿದ್ದರು. ಇನ್ನೊಂದು ಕಡೆ ಹೊಳೆನರಸೀಪುರದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.

ಅಶ್ಲೀಲ ವಿಡಿಯೋ ಮತ್ತು ಅತ್ಯಾ*ಚಾರಕ್ಕೆ ಸಂಬಂಧಪಟ್ಟಂತೆ ಪ್ರಜ್ವಲ್‌ ರೇವಣ್ಣ ವಿರುದ್ಧ ಒಟ್ಟು ನಾಲ್ಕು ಪ್ರಕರಣಗಳಿದೆ. ಮೊದಲ ಪ್ರಕರಣದಲ್ಲಿ ಪ್ರಜ್ವಲ್‌ ಅಪರಾಧಿ ಎಂದು ಸಾಬೀತಾಗಿದೆ. ಪ್ರಕರಣ ದಾಖಲಾಗಿ 14 ತಿಂಗಳೊಳಗೆ ವಿಚಾರಣೆ ಪೂರ್ಣಗೊಂಡಿದ್ದು, ತೀರ್ಪು ಹೊರಬಂದಿರುವುದು ಗಮನಾರ್ಹ ವಿಷಯ.