ಪುತ್ತೂರು; ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಬಳಿ ಪರಸ್ಪರ ಹೊಡೆದಾಡಿಕೊಂಡು ಸಾರ್ವಜನಿಕ ಶಾಂತಿ ಭಂಗಪಡಿಸಿದ ಆರೋಪದಲ್ಲಿ ಮೂವರು ಸೇರಿ ಇತರರ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.
Sponsoredಜು.2 ರಂದು ಕೆಲ ಯುವಕರು ಬಸ್ ನಿಲ್ದಾಣದ ಬಳಿ ಗಲಾಟೆ ನಡೆಸುತ್ತಿರುವ ಕುರಿತು ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಬಂದಾಗ, ಆರೋಪಿಗಳು ಅಲ್ಲಿಂದ ಪರಾರಿಯಾಗಿದ್ದರು. ನಂತರ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲನೆ ಮಾಡಿದ್ದು, ವಿಚಾರಣೆ ನಡೆಸಿದ ಸಂದರ್ಭದಲ್ಲಿ ನಾಸಿರ್, ನವಾಜ್, ನಿಸಾರ್ ಹಾಗೂ ಇತರರು ಸಾರ್ವಜನಿಕ ಸ್ಥಳದಲ್ಲಿ ಪರಸ್ಪರ ಹೊಡೆದಾಡಿಕೊಂಡು ಸಾರ್ವಜನಿಕ ಶಾಂತಿ ಭಂಗಪಡಿಸಿರುವುದು ಬೆಳಕಿಗೆ ಬಂದಿದೆ.
ಈ ಹಿನ್ನೆಲೆಯಲ್ಲಿ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ವಿರುದ್ಧ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.



