

ಪುತ್ತೂರು: ಗ್ರಾಮಾಂತರ ಪೊಲೀಸರು ಠಾಣಾ ವ್ಯಾಪ್ತಿಯ ಬೆಟ್ಟಂಪಾಡಿ, ಇರ್ದೆ, ರೆಂಜ ಹಾಗೂ ಆರ್ಲಪದವು ಪರಿಸರದಲ್ಲಿ ಅಕ್ರಮವಾಗಿ ಎಂಡಿಎಂಎ ಮಾರಾಟ ಮಾಡುತ್ತಿದ್ದ ಅಂತರಜಿಲ್ಲಾ ಜಾಲವೊಂದನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ.
ಪುತ್ತೂರಿನ ಮೊಹಮ್ಮದ್ ಹರ್ಷದ್, ಮಹಮ್ಮದ್ ಆರೀಶ್, ಇಬ್ರಾಹಿಂ ಅಶ್ರಫ್ ಅಲಿಯಾಸ್ ರೋಜಾ ಅಶ್ರಫ್ ಹಾಗೂ ಮಾದಕ ವಸ್ತು ಪೂರೈಕೆದಾರ ಬಂಟ್ವಾಳ ಮೂಲದ ಮುಸ್ತಾಫ ಎನ್ನುವ ನಾಲ್ವರನ್ನು ಪೊಲೀಸರು ಬಂಧನ ಮಾಡಿದ್ದಾರೆ.
ಬಂಧಿತ ಆರೋಪಿಗಳಿಂದ ಸುಮಾರು 50000 ರೂ. ಸಾವಿರ ಮೌಲ್ಯದ 6.39ಗ್ರಾಂ ಎಂಡಿಎಂಎ ಹಾಗೂ ಅಲ್ಪ ಪ್ರಮಾಣದ ಗಾಂಜಾವನ್ನು ಜಪ್ತಿ ಮಾಡಲಾಗಿದೆ. ಈ ಕೃತ್ಯಕ್ಕಾಗಿ ಆರೋಪಿಗಳು ಬಳಸುತ್ತಿದ್ದ ಸುಮಾರು 6 ಲಕ್ಷ ರೂ. ಮೌಲ್ಯದ ಎರಡು ಕಾರುಗಳು ಹಾಗೂ ಮೊಬೈಲ್ ಫೋನ್‌ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ವಶಪಡಿಸಿಕೊಂಡು ಒಟ್ಟು ಸೊತ್ತುಗಳ ಮೌಲ್ಯ ಅಂದಾಜು ರೂ.6.50 ಲಕ್ಷ ಆಗಿದೆ. ಆರೋಪಿಗಳ ವಿರುದ್ಧ ಮಾದಕ ವಸ್ತು ನಿಯಂತ್ರಣ ಕಾಯ್ದೆ ಹಾಗೂ ಶಸ್ತ್ರಾಸ್ತ್ರ ಕಾಯ್ದೆಯಡಿ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಗಂಭೀರ ಪ್ರಕರಣ ದಾಖಲು ಮಾಡಲಾಗಿದೆ.













