Home » ಬೆಂಗಳೂರಿನಲ್ಲಿ ಘೋರ ದುರಂತ: ರೀಲ್ಸ್ ಕಿಚ್ಚಿಗೆ ಬಿಯರ್ ಬಾಟಲಿಯಿಂದ ಹೊಡೆದು ಕೊಂದ ಪಾಪಿ

ಬೆಂಗಳೂರಿನಲ್ಲಿ ಘೋರ ದುರಂತ: ರೀಲ್ಸ್ ಕಿಚ್ಚಿಗೆ ಬಿಯರ್ ಬಾಟಲಿಯಿಂದ ಹೊಡೆದು ಕೊಂದ ಪಾಪಿ

0 comments

ಬೆಂಗಳೂರು: ಸಾಮಾಜಿಕ ಜಾಲತಾಣದಲ್ಲಿ ರೀಲ್ಸ್‌ ನೋಡುತ್ತಿದ್ದ ವಿಚಾರಕ್ಕೆ ದಂಪತಿ ನಡುವೆ ಆರಂಭವಾದ ಜಗಳ ದುರಂತದಲ್ಲಿ ಅಂತ್ಯಗೊಂಡಿರುವ ಘಟನೆ ನಗರದ ಹೆಚ್‌ಎಎಲ್‌ ವ್ಯಾಪ್ತಿಯ ವಿಭೂತಿಪುರದಲ್ಲಿ ನಡೆದಿದೆ.

ರಾಘವೇಂದ್ರ ಎಂಬಾತ ತನ್ನ ಪತ್ನಿ ಶೃತಿ ಅವರನ್ನು ಕೊಂದು ಬಳಿಕ ಆತ್ಮಹತ್ಯೆಗೆ ಶರಣಾಗಿದ್ದಾನೆ ಎನ್ನಲಾಗಿದೆ.

ರಾಘವೇಂದ್ರ ಹಾಗೂ ಶೃತಿ ಪ್ರೀತಿಸಿ ವಿವಾಹವಾಗಿದ್ದರು. ದಂಪತಿಗೆ ಇಬ್ಬರು ಮಕ್ಕಳಿದ್ದು, ಮಕ್ಕಳನ್ನು ದಾವಣಗೆರೆಯಲ್ಲಿರುವ ಅಜ್ಜಿ ಮನೆಯಲ್ಲಿ ಇರಿಸಲಾಗಿತ್ತು. ಘಟನೆ ನಡೆದ ವೇಳೆ ದಂಪತಿ ಇಬ್ಬರೇ ಮನೆಯಲ್ಲಿ ಇದ್ದರು ಎನ್ನಲಾಗಿದೆ.

ರೀಲ್ಸ್‌ ನೋಡುವ ವಿಚಾರಕ್ಕೆ ಸಂಬಂಧಿಸಿದಂತೆ ಇಬ್ಬರ ನಡುವೆ ಮಾತಿನ ಚಕಮಕಿ ಆರಂಭವಾಗಿದ್ದು, ಬಳಿಕ ಗಲಾಟೆ ತೀವ್ರಗೊಂಡಿದೆ. ಈ ವೇಳೆ ರಾಘವೇಂದ್ರ ಬಿಯರ್ ಬಾಟಲ್‌ನಿಂದ ಶೃತಿ ಅವರ ತಲೆಗೆ ಹೊಡೆದಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಅವರು ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಪತ್ನಿಯ ಸಾವಿನ ಬಳಿಕ ರಾಘವೇಂದ್ರ ಕೂಡ ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ತಿಳಿದುಬಂದಿದೆ. ಘಟನೆ ಕುರಿತು ಹೆಚ್‌ಎಎಲ್‌ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

You may also like