Home » ರೇಣುಕಾಸ್ವಾಮಿ ಹತ್ಯೆ ಪ್ರಕರಣ: ಸಾಕ್ಷಿಗಳಿಗೆ ಬೆದರಿಕೆ, ಪ್ರಮುಖ ಆರೋಪಿಗೆ ಜಾಮೀನು

ರೇಣುಕಾಸ್ವಾಮಿ ಹತ್ಯೆ ಪ್ರಕರಣ: ಸಾಕ್ಷಿಗಳಿಗೆ ಬೆದರಿಕೆ, ಪ್ರಮುಖ ಆರೋಪಿಗೆ ಜಾಮೀನು

0 comments

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಸಾಕ್ಷಿಗಳಿಗೆ ಬೆದರಿಕೆ ಹಾಕಿದ್ದ ಉಡುಪಿ ಮೂಲದ ಗೌರವ್‌ ಶೆಟ್ಟಿಗೆ ನಿರೀಕ್ಷಣಾ ಜಾಮೀನು ಮಂಜೂರಾಗಿದೆ.

ಬಂಧನ ಭೀತಿ ಹಿನ್ನಲೆ ನಿರೀಕ್ಷಣಾ ಜಾಮೀನಿಗೆ ಗೌರವ್‌ ಶೆಟ್ಟಿ ಅರ್ಜಿ ಸಲ್ಲಿಸಿದ್ದು, ಅರ್ಜಿ ವಿಚಾರಣೆ ಮಾಡಿದ 59 ಸಿಸಿಹೆಚ್‌ ಕೋರ್ಟ್‌ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.

ಸಾಕ್ಷಿದಾರ ಸಂದೀಪ್‌ಗೆ ವಾಟ್ಸಪ್‌ ಕರೆ ಮೂಲಕ ಆರೋಪಿಗಳು ಬೆದರಿಕೆ ಹಾಕಿದ್ದರು. ಈ ಪ್ರಕರಣದಲ್ಲಿ ಸುಹಾಸ್‌, ವೇಣು, ಪುನೀತ್‌ನನ್ನು ಕಾಮಾಕ್ಷಿ ಪಾಳ್ಯ ಪೊಲೀಸರು ಬಂಧನ ಮಾಡಿದ್ದು, ಪ್ರಮುಖ ಆರೋಪಿ ಗೌರವ್‌ ಶೆಟ್ಟಿ ತಲೆಮರೆಸಿಕೊಂಡಿದ್ದ. ಇದೀಗ ನಿರೀಕ್ಷಣಾ ಜಾಮೀನು ಪಡೆದಿರುವ ಗೌರವ್‌ ಶೆಟ್ಟಿ ಕಾಮಾಕ್ಷಿ ಪಾಳ್ಯ ಪೊಲೀಸ್‌ ಠಾಣೆಗೆ ವಿಚಾರಣೆಗೆ ಹಾಜರಾಗುವ ಸಾಧ್ಯತೆಯಿದೆ.

You may also like