ರೇಣುಕಾಸ್ವಾಮಿ ಕೇಸ್: ಪ್ರತ್ಯಕ್ಷ ಸಾಕ್ಷಿ ಪುನೀತ್ ಬಂಧನಕ್ಕೆ ವಾರೆಂಟ್
ರೇಣುಕಾಸ್ವಾಮಿ ಹತ್ಯೆ ಹಾಗೂ ಸಾಕ್ಷಿಗಳಿಗೆ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾನೂನು ಪ್ರಕ್ರಿಯೆಗಳು ತೀವ್ರಗೊಂಡಿವೆ. ನಟ ದರ್ಶನ್ ಆಪ್ತ ಹಾಗೂ ‘ಡಿ ಕಂಪನಿ’ ಫ್ಯಾನ್ ಪೇಜ್ ನಿರ್ವಹಿಸುತ್ತಿದ್ದ ಪುನೀತ್ ವಿರುದ್ಧ ಕೋರ್ಟ್ ಜಾಮೀನು ರಹಿತ ವಾರೆಂಟನ್ನು ಕೋರ್ಟ್ ಹೊರಡಿಸಿದೆ.
Sponsoredವಿಚಾರಣೆಗೆ ಗೈರುಹಾಜರಿ: ಪ್ರಕರಣದ ವಿಚಾರಣೆ ಅಥವಾ ತನಿಖೆಗೆ ಸಂಬಂಧಿಸಿದಂತೆ ನ್ಯಾಯಾಲಯದಿಂದ ಸಮನ್ಸ್ ಜಾರಿಯಿದ್ದರೂ, ಪುನೀತ್ ಸತತವಾಗಿ ವಿಚಾರಣೆಗೆ ಹಾಜರಾಗದೆ ಗೈರುಹಾಜರಾಗಿದ್ದರು. ಇದರಿಂದ ಕೋರ್ಟ್ ಗಂಭೀರವಾಗಿ ಪರಿಗಣಿಸಿ ಆತನ ವಿರುದ್ಧ ಬಂಧನ ವಾರೆಂಟ್ ಜಾರಿ ಮಾಡಿದೆ.
ಸಾಕ್ಷಿ ಬೆದರಿಕೆ ಆರೋಪ: ದರ್ಶನ್ ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಮುಖ ಸಾಕ್ಷಿಗಳಿಗೆ ಬೆದರಿಕೆ ಹಾಕಿದ ಪ್ರಕರಣದಲ್ಲಿ ಈ ಹಿಂದೆ ದರ್ಶನ್ ಅಭಿಮಾನಿಗಳು ಹಾಗೂ ಆಪ್ತರ ಮೇಲೆ ಆರೋಪಗಳು ಕೇಳಿಬಂದಿದ್ದವು. ಈ ಪೈಕಿ ಪುನೀತ್ ಪಾತ್ರ ಹಾಗೂ ಸಾಕ್ಷಿಗಳ ಮೇಲೆ ಒತ್ತಡ ಹೇರಿದ ಕುರಿತು ತನಿಖೆ ಮುಂದುವರಿದಿದೆ.
ಕಾನೂನು ಕ್ರಮಗಳಿಂದ ತಪ್ಪಿಸಿಕೊಳ್ಳಲು ತಲೆಮರೆಸಿಕೊಳ್ಳುವುದು ಮತ್ತು ತನಿಖಾಧಿಕಾರಿಗಳ ವಿಚಾರಣೆಗೆ ಸಹಕರಿಸದ ಹಿನ್ನೆಲೆಯಲ್ಲಿ ಪೊಲೀಸರು ನ್ಯಾಯಾಲಯದ ಮೊರೆ ಹೋಗಿದ್ದು, ಕೋರ್ಟ್ ಈ ಕಠಿಣ ಕ್ರಮ ಕೈಗೊಂಡಿದೆ.



