ಕಾಸರಗೋಡು: ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ಅಪರಾಧಿಗೆ 46ವರ್ಷ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ರೂ.62000 ದಂಡ ವಿಧಿಸಲಾಗಿದೆ.

ಪುಂಚಾವಿ ನಿವಾಸಿ ಸಲೀಂ ಪಿ.ಎ.(36) ಅಪರಾಧಿ. ದಂಡ ಪಾವತಿ ಮಾಡದಿದ್ದರೆ ಹೆಚ್ಚುವರಿಯಾಗಿ ಒಂದು ವರ್ಷದ ಎರಡು ತಿಂಗಳ ಜೈಲು ಶಿಕ್ಷೆ ಅನುಭವಿಸಬೇಕು ಎಂದು ಹೇಳಿದ್ದಾರೆ.
ಜೂನ್ 2, 2022 ರಂದು ಮೇಲ್ಬರಂಬ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಶಾಲೆಗೆ ಬಿಡುವುದಾಗಿ ನಂಬಿಸಿ ಬಾಲಕಿಯನ್ನು ದ್ವಿಚಕ್ರ ವಾಹನದಲ್ಲಿ ಕರೆದೊಯ್ದು, ಶಾಲೆಗೂ ಬಿಡದೆ, ಕೋತಿ ತೋರಿಸುವುದಾಗಿ ಹೇಳಿ ಬಾಲಕಿಯನ್ನು ಆದೂರು ಭಾಗದ ಕಾಡಿಗೆ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ್ದ ಪ್ರಕರಣ ದಾಖಲಾಗಿತ್ತು.