ಶಿವಮೊಗ್ಗ: ಬಸ್‌ನಿಲ್ದಾಣದಲ್ಲಿ 10 ದಿನದ ಕೂಸನ್ನು ಬಿಟ್ಟು ಹೋದ ಪಾಪಿಗಳು
ಶಿವಮೊಗ್ಗ: ಹೆತ್ತ ಕರುಳು ತನ್ನ ಕುಡಿಯನ್ನು ಅನಾಥವಾಗಿ ಬಿಟ್ಟು ಹೋಗಿರುವ ಘಟನೆ ಶಿವಮೊಗ್ಗ ಜಿಲ್ಲೆಯಲ್ಲಿ ನಡೆದಿದೆ. ಹಾಲಿನ ಬಾಟಲಿಯನ್ನು ಪಕ್ಕದಲ್ಲಿಟ್ಟು, ಮಗುವನ್ನು ಕೈಚೀಲವೊಂದರಲ್ಲಿ ತುಂಬಿ ಬಸ್ ನಿಲ್ದಾಣದಲ್ಲಿ ಬಿಟ್ಟು ಹೋದ ಅಮಾನವೀಯ ಘಟನೆಯೊಂದು ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಸಮೀಪದ ಗವಟೂರು ಗ್ರಾಮದಲ್ಲಿ ನಡೆದಿದೆ.
Sponsoredಗವಟೂರು ಹೊಳೆಯ ಸಮೀಪವಿರುವ ಬಸ್ ನಿಲ್ದಾಣದಲ್ಲಿ ಶನಿವಾರ ರಾತ್ರಿ 9 ಗಂಟೆ ಸುಮಾರಿಗೆ ಬಸ್ ನಿಲ್ದಾಣದ ಹಿಂಭಾಗ ನಿವಾಸಿಯೊಬ್ಬರಿಗೆ ಮಗುವಿನ ಅಳುವಿನ ಶಬ್ದ ಕೇಳಿಸಿದೆ. ಕೂಡಲೇ ಸ್ಥಳಕ್ಕೆ ಬಂದಾಗ ಕೈಚೀಲದಲ್ಲಿ ಬಟ್ಟೆಯಿಂದ ಸುತ್ತಿದ ಸ್ಥಿತಿಯಲ್ಲಿ ನವಜಾತ ಶಿಶು ಕಂಡು ಬಂದಿದೆ.
ಕೂಡಲೇ ಸ್ಥಳೀಯರು ರಿಪ್ಪನ್‌ಪೇಟೆ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಸ್ಥಳಕ್ಕೆ ಬಂದಿದ್ದು, ಮಗುವನ್ನು ಸುರಕ್ಷಿತವಾಗಿ ರಕ್ಷಣೆ ಮಾಡಿದ್ದಾರೆ.
ಸುಮಾರು 10 ರಿಂದ 15 ದಿನದ ಪ್ರಾಯದ ಈ ಹೆಣ್ಣು ಮಗು 1.6 ಕೆಜಿ ತೂಕವಿದ್ದು, ಆರೋಗ್ಯವಾಗಿದೆ ಎಂದು ವರದಿಯಾಗಿದೆ.



