ಸೋಮವಾರ, 26 ಅಕ್ಟೋಬರ್ 2026
Trending

ಒಂದೇ ಮರಕ್ಕೆ ನೇಣು ಬಿಗಿದು ಇಬ್ಬರು ಯುವತಿಯರ ಪ್ರಕರಣಕ್ಕೆ ಶಾಕಿಂಗ್‌ ಟ್ವಿಸ್ಟ್‌!

Advertisement

ಬೆಂಗಳೂರು ಆ.07: ಬೆಂಗಳೂರಿನಲ್ಲಿ ಒಂದೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದ ಇಬ್ಬರು ಯುವತಿಯರ ಸಾವಿನ ರಹಸ್ಯ ಬೆಳಕಿಗೆ ಬಂದಿದೆ. 22 ವರ್ಷದ ಸಿರ್ಜನಾ ಮತ್ತು 23 ವರ್ಷದ ರಿತಾ ಪರಸ್ಪರ ಪ್ರೀತಿ ಮಾಡುತ್ತಿದ್ದು, ಒಟ್ಟಿಗೆ ಬದುಕು ನನಸಾಗುವುದಿಲ್ಲ ಎನ್ನುವ ನೋವಿನಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನುವ ಮಾಹಿತಿ ಪೊಲೀಸ್‌ ತನಿಖೆಯಲ್ಲಿ ಬಹಿರಂಗಗೊಂಡಿರುವ ಕುರಿತು ವರದಿಯಾಗಿದೆ.

Sponsored

ಮೃತ ಯುವತಿಯರ ಕುಟುಂಬದವರು ಹಾಗೂ ಸಂಬಂಧಿಕರನ್ನು ವಿಚಾರಣೆ ಮಾಡಿದಾಗ ಈ ವೇಳೆ ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದು, ಮದುವೆಯಾಗುವ ಆಸೆ ಹೊಂದಿದ್ದರು. ಆದರೆ ಕುಟುಂಬ ಸಮಾಜ ಇದನ್ನು ಒಪ್ಪಲ್ಲ ಎನ್ನುವ ಭಯದಿಂದ ಈ ರೀತಿ ಮಾಡಿದ್ದಾರೆ ಎನ್ನುವ ಸಂಗತಿ ಬೆಳಕಿಗೆ ಬಂದಿದೆ.

Advertisement
Advertisement

ಸಿರ್ಜನಾ ಮತ್ತು ರಿತಾ ಸಂಬಂಧಿಕರಾಗಿದ್ದು, ನೇಪಾಳದಲ್ಲಿ ಒಟ್ಟಿಗೆ ಓದಿ ಬೆಳೆದಿದ್ದರು. ಬಾಲ್ಯದಿಂದಲೇ ಇಬ್ಬರೂ ಬೇರ್ಪಡದೆ ಇದ್ದ ಕಾರಣ ಅವರ ಕುರಿತು ಊರಿನಲ್ಲಿ ಮಾತುಕತೆಗಳು ಆರಂಭವಾಗಿದ್ದವು. ನಂತರ ಇವರ ಕುಟುಂಬದವರು ಇವರನ್ನು ಬೆಂಗಳೂರಿಗೆ ಕರೆಸಿಕೊಂಡಿದ್ದರು. ಬೆಂಗಳೂರಿಗೆ ಬಂದ ನಂತರವೂ ಅವರು ಬೇರೆ ಕಡೆ ವಾಸವಾಗಿದ್ದರೂ, ವಾರದಲ್ಲಿ ಮೂರು ನಾಲ್ಕು ಬಾರಿ ಭೇಟಿಯಾಗಿ ಸಮಯ ಕಳೆಯುತ್ತಿದ್ದರು.

ಘಟನೆ ನಡೆದ ದಿನ ಇಬ್ಬರೂ ಸಂಬಂಧಿಕರ ಮನೆಗೆ ಊಟಕ್ಕೆಂದು ತೆರಳಿದ್ದರು. ಈ ವೇಳೆ ಕುಟುಂಬದಲ್ಲಿ ಮದುವೆ ವಿಷಯ ಪ್ರಸ್ತಾಪವಾಗಿತ್ತು. ಸಮಾಜ ನಮ್ಮನ್ನು ಒಟ್ಟಿಗೆ ಬದುಕಲು ಬಿಡುವುದಿಲ್ಲ ಎನ್ನುವ ಮಾತನ್ನಾಡಿದ್ದಾರೆ ಎನ್ನಲಾಗಿದೆ. ಈ ಭಾವನಾತ್ಮಕ ಒತ್ತಡವೇ ಆತ್ಮಹತ್ಯೆ ನಿರ್ಧಾರಕ್ಕೆ ಕಾರಣವಾಗಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.

ಮರಣೋತ್ತರ ಪರೀಕ್ಷೆಯ ನಂತರ ಮೃತದೇಹಗಳನ್ನು ಕುಟುಂಬದವರಿಗೆ ಹಸ್ತಾಂತರ ಮಾಡಲಾಗಿದ್ದು, ಪ್ರಕರಣದ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ.

Advertisement
div class="ere-sticky">