Advertisement
Advertisement
ಸುಬ್ರಹ್ಮಣ್ಯ: ವೈಯಕ್ತಿಕ ಕಾರಣಗಳಿಂದ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿದ ಉಡುಪಿ ಮೂಲದ ಮಹಿಳೆಯೊಬ್ಬರನ್ನು ಪೊಲೀಸರು ಸಾರ್ವಜನಿಕರ ಸಹಕಾರದಿಂದ ರಕ್ಷಿಸಿದ ಘಟನೆ ನ.4ರಂದು ರಾತ್ರಿ ಕುಮಾರಧಾರಾ ಸೇತುವೆ ಬಳಿ ನಡೆದಿದೆ.
Sponsoredಮಹಿಳೆ ರಾತ್ರಿ ವೇಳೆ ಸೇತುವೆ ಬಳಿ ಆತ್ಮಹತ್ಯೆಗೆ ಯತ್ನಿಸುತ್ತಿದ್ದ ಸಂದರ್ಭದಲ್ಲಿ ಮೊಸಳೆಯೊಂದು ಕಚ್ಚಿ ಸಣ್ಣ ಪ್ರಮಾಣದಲ್ಲಿ ಗಾಯಗೊಳಿಸಿದೆ. ಮಹಿಳೆಯ ಬೊಬ್ಬೆ ಕೇಳಿದ ಸಮೀಪದ ಲಾಡ್ಜ್‌ನ ಸಿಬ್ಬಂದಿ ತಕ್ಷಣ ಸುಬ್ರಹ್ಮಣ್ಯ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ.
ಮಾಹಿತಿ ತಿಳಿದು ಸ್ಥಳಕ್ಕೆ ಧಾವಿಸಿದ ಪೊಲೀಸರು ಸಾರ್ವಜನಿಕರ ಸಹಕಾರದಿಂದ ಮಹಿಳೆಯನ್ನು ರಕ್ಷಿಸಿದ್ದಾರೆ. ಬಳಿಕ ಆಕೆಯನ್ನು ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿ, ಮನೆಯವರೊಂದಿಗೆ ಕಳುಹಿಸಿಕೊಟ್ಟಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಯಾವುದೇ ಪ್ರಕರಣ ದಾಖಲಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.