Home Crime Suhas Murder Case: ಸುಹಾಸ್‌ ಶೆಟ್ಟಿ ಹತ್ಯೆ ಕೇಸ್‌ ಬೆನ್ನಲ್ಲೇ ಉಡುಪಿಯಲ್ಲಿ ಮುಸ್ಲಿಂ ಯುವಕನ ಕೊಲೆಗೆ...

Suhas Murder Case: ಸುಹಾಸ್‌ ಶೆಟ್ಟಿ ಹತ್ಯೆ ಕೇಸ್‌ ಬೆನ್ನಲ್ಲೇ ಉಡುಪಿಯಲ್ಲಿ ಮುಸ್ಲಿಂ ಯುವಕನ ಕೊಲೆಗೆ ಯತ್ನ!

Crime

Hindu neighbor gifts plot of land

Hindu neighbour gifts land to Muslim journalist

Suhas Murder Case: ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್‌ ಶೆಟ್ಟಿ ಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.

ಇದರ ಮಧ್ಯೆ ಉಡುಪಿ ತಾಲೂಕಿನ ಆತ್ರಾಡಿಯಲ್ಲಿ ಮುಸ್ಲಿಂ ಯುವಕನ ಕೊಲೆಗೆ ಯತ್ನಿಸಿರುವಂತಹ ಘಟನೆ ನಡೆದಿದೆ. ಅಟೋ ಚಾಲಕ ಅಬೂಬ್ಬಕರ್ ಮೇಲೆ ದಾಳಿ ಮಾಡಲಾಗಿರುವ ಕುರಿತು ವರದಿಯಾಗಿದೆ.

ಆಟೋ ಅಡ್ಡಗಟ್ಟಿ ಚಾಲಕ ಅಬೂಬಕ್ಕರ್‌ ಕೊಲೆಗೆ ಯತ್ನ ಮಾಡಲಾಗಿದೆ. ಅಬೂಬಕ್ಕರನನ್ನು ಅಡ್ಡಗಟ್ಟಿ ಸುಶಾಂತ್‌, ಸಂದೇಶ್‌ ಪೂಜಾರಿ ಎಂಬುವವರು ಕೊಲೆಗೆ ಯತ್ನ ಮಾಡಿದ್ದಾರೆ ಎಂದು ವರದಿಯಾಗಿದೆ. ಹಿರಿಯಡ್ಕ ಪೊಲೀಸರು ಇಬ್ಬರನ್ನು ಬಂಧನ ಮಾಡಿದ್ದಾರೆ.

ಪೊಲೀಸರ ವಿಚಾರಣೆ ಸಂದರ್ಭ ಸುಹಾಸ್‌ ಶೆಟ್ಟಿ ಹತ್ಯೆಗೆ ಪ್ರತೀಕಾರವಾಗಿ ಕೃತ್ಯ ಎಸಗಿರುವುದಾಗಿ ಇಬ್ಬರು ತಪ್ಪೊಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ.

ಈ ಕುರಿತು ಹಿರಿಯಡ್ಕ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.