ಸುರತ್ಕಲ್: ವ್ಯಕ್ತಿ ಆತ್ಮಹತ್ಯೆ ಪ್ರಕರಣ: ಠಾಣೆ ಎದುರು ಶವವಿಟ್ಟು ಪ್ರತಿಭಟನೆ, ಸಂಚಾರ ಸ್ಥಗಿತ
ಮಂಗಳೂರು: ಪೊಲೀಸ್ ವಿಚಾರಣೆಯಿಂದ ಮನನೊಂದು ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿ, ಮೃತದೇಹವನ್ನಿಟ್ಟು ಸ್ಥಳೀಐರು ಸುರತ್ಕಲ್ ಪೊಲೀಸ್ ಠಾಣೆಯ ಮುಂಭಾಗ ಪ್ರತಿಭಟನೆ ನಡೆಸಿದ ಘಟನೆ ಮಂಗಳವಾರ ನಡೆದಿದೆ.
Sponsoredಈ ಪ್ರತಿಭಟನೆಯಿಂದ ಉಡುಪಿ-ಮಂಗಳೂರು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ಸ್ಥಗಿತಗೊಂಡು ವಾಹನ ಸವಾರರು ಪರದಾಡುವಂತಾಗಿದೆ.
ಅ.25 ರಂದು ರಾತ್ರಿ ಹೊಸಬೆಟ್ಟು ಬೀಚ್ ಬಳಿ ಅನುಮಾನಸ್ಪದವಾಗಿ ತಿರುಗಾಡುತ್ತಿದ್ದ ಜೋಡಿಯನ್ನು ಕಂಡು ಸೋಮನಾಥ ಪ್ರಶ್ನೆ ಮಾಡಿದ್ದರು. ಈ ವಿಚಾರವಾಗಿ ಯುವತಿ ಸೋಮನಾಥ ಅವರ ವಿರುದ್ಧ ಸುರತ್ಕಲ್ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಪೊಲೀಸರು ಸೋಮನಾಥ ಅವರನ್ನು ವಿಚಾರಣೆ ಮಾಡಿ ಮನೆಗೆ ಕಳುಹಿಸಿದ್ದರು ಎನ್ನಲಾಗಿದೆ.
ಆದರೆ ಪೊಲೀಸ್ ವಿಚಾರಣೆಯಿಂದ ನೊಂದ ಸೋಮನಾಥ ಅವರು ಮಂಗಳವಾರ ಬೆಳಗ್ಗೆ ಆತ್ಮಹತ್ಯೆ ಮಾಡಿದ್ದಾರೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಪೊಲೀಸ್ ದೌರ್ಜನ್ಯವೇ ಆತ್ಮಹತ್ಯೆಗೆ ಕಾರಣ ಎಂದು ಆರೋಪದೊಂದಿಗೆ ಆಕ್ರೋಶ ವ್ಯಕ್ತಪಡಿಸಿದ ಸ್ಥಳೀಯರು ಮೃತದೇಹವನ್ನು ಸುರತ್ಕಲ್ ಪೊಲೀಸ್ ಠಾಣೆಯ ಮುಂದೆ ಇಟ್ಟು ಪ್ರತಿಭಟನೆ ನಡೆಸಿದರು.
ಈ ಕುರಿತು ಪ್ರತಿಕ್ರಿಯೆ ನೀಡಿದ ಮಂಗಳೂರು ಪೊಲೀಸ್ ಕಮೀಷನರ್ ಸುಧೀರ್ ಕುಮಾರ್ ರೆಡ್ಡಿ ಅವರು ” ಅ.25 ರಂದು ಹೊಸಬೆಟ್ಟು ಬೀಚ್‌ಗೆ ಬಂದಿದ್ದ ಜೋಡಿಯೊಂದನ್ನು ಸೋಮನಾಥ ಮತ್ತು ಇತರರು ತೊಂದರೆಗೊಳಿಸಿದ್ದಾರೆ ಎಂದು ಆರೋಪದ ಹಿನ್ನೆಲೆಯಲ್ಲಿ ಪ್ರಕರಣ ದಾಖಲು ಮಾಡಲಾಗಿತ್ತು. ಈ ಪ್ರಕರಣದಲ್ಲಿ ಶಿಕ್ಷೆಯ ಪ್ರಮಾಣ ಮೂರು ವರ್ಷಕ್ಕಿಂಗ ಕಡಿಮೆ ಇರುವುದರಿಂದ ಸೋಮನಾಥ ಅವರಿಗೆ ನೋಟಿಸ್ ಜಾರಿಗೊಳಿಸಲಾಗಿತ್ತು. ನಂತರ ಸೋಮನಾಥ ಅವರು ಆತ್ಮಹತ್ಯೆ ಪತ್ರ ಬರೆದಿಟ್ಟು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿದ್ದಾರೆ ಎಂದು ಪ್ರತಿಕ್ರಿಯೆ ನೀಡಿದ್ದಾರೆ.




