ಭಾನುವಾರ, 25 ಅಕ್ಟೋಬರ್ 2026
Trending

ಟ್ರೆಕ್ಕಿಂಗ್ ಹೋದಾಗ ಸಂಭವಿಸಿದ್ದು ಆಕಸ್ಮಿಕ ಸಾವಲ್ಲ- ಬೇಕಂತಲೇ ವರನನ್ನು 400 ಅಡಿ ಕಂದಕಕ್ಕೆ ತಳ್ಳಿ ಕೊಂದ ಭಾವಿ ಪತ್ನಿ!!

ಇಂದೋರ್‌ನ ರಘುವಂಶಿ ಮತ್ತು ರಾಜ ರಘುವಂಶಿ ಕೇಸ್​​ ಬಹುಶಃ ಎಲ್ಲರಿಗೂ ನೆನಪಿರುತ್ತದೆ. ಹನಿಮೂನ್​ ನೆಪದಲ್ಲಿ ಸ್ವಂತ ಗಂಡನನ್ನೇ ಹೆಂಡತಿ ಹತ್ಯೆ  ಮಾಡಿದ್ದಳು. ಇದೀಗ ಮಹಾರಾಷ್ಟ್ರದ ಲೋನಾವಾಲ ಬಳಿಯ ಲೋಹಗಢದಲ್ಲಿ ಇಂತದ್ದೇ ಒಂದು ಘಟನೆ ನಡೆದಿದ್ದು, ಅದೇ ಕೇಸನ್ನು ನೆನಪಿಸುತ್ತಿದೆ.

Sponsored

ಜೂನ್ 18 ರಂದು ಮಹಾರಾಷ್ಟ್ರದ ಲೋನಾವಾಲಾ ಸಮೀಪದ ಪ್ರಸಿದ್ಧ ಪ್ರವಾಸಿ ತಾಣ ಲೋಹಗಢ ಕೋಟೆಯಲ್ಲಿ 26 ವರ್ಷದ ಯುವ ಉದ್ಯಮಿ ಕೇತನ್ ವಿಶಾಲ್ ಅಗರ್ವಾಲ್ ತಾನು ಮದುವೆಯಾಗುವ ಹುಡುಗಿಯ ಜೊತೆ ಪ್ರಿವೆಂಟಿಂಗ್ ಶೂಟ್ ತೆಗೆಸಲು ಹೋಗಿ 400 ಆಳದ ಕಂದಕಕ್ಕೆ ಬಿದ್ದು ನಿಗೂಢವಾಗಿ ಸಾವನ್ನಪ್ಪಿದ್ದರು. ಆದರೆ ಇದೀಗ ಇದು ಆಕಸ್ಮಿಕ ಸಾವಲ್ಲ, ಭೀಕರ ಕೊಲೆ ಎಂಬುದು ಭಯಲಾಗಿದೆ.

ನಡೆದಿದ್ದು ಏನು?

ಜೂನ್ 19 ರಂದು ಸಿಯಾ ಗೋಯಲ್ ಹುಟ್ಟುಹಬ್ಬವಿತ್ತು. ಇದರ ಮುನ್ನಾದಿನ ಅಂದರೆ ಜೂನ್ 18 ರಂದು ಬೆಳಿಗ್ಗೆ, ಭಾವಿ ಪತ್ನಿಯ ಬರ್ತ್‌ಡೇ ಆಚರಣೆ ಹಾಗೂ ಪ್ರಿ-ವೆಡ್ಡಿಂಗ್ ಫೋಟೋಶೂಟ್‌ಗಾಗಿ ಕೇತನ್ ಮತ್ತು ಸಿಯಾ ಲೋಹಗಢ ಕೋಟೆಗೆ ಟ್ರೆಕ್ಕಿಂಗ್ ಬಂದಿದ್ದರು. ಕೋಟೆಯ ತುದಿಯಲ್ಲಿ ಬೆಳಿಗ್ಗೆ 10:30ರ ಸುಮಾರಿಗೆ ಫೋಟೋ ತೆಗೆದುಕೊಳ್ಳುವಾಗ ತೀವ್ರ ಗಾಳಿಗೆ ಕೇತನ್ ಆಯತಪ್ಪಿ 400 ಅಡಿ ಆಳದ ಕಂದಕಕ್ಕೆ ಬಿದ್ದು ಸಾವನ್ನಪ್ಪಿದ್ದಾರೆ ಎಂದು ಆರಂಭದಲ್ಲಿ ಬಿಂಬಿಸಲಾಗಿತ್ತು. ಪೊಲೀಸರು ಕೂಡ ಇದನ್ನು ಆಕಸ್ಮಿಕ ಸಾವು ಎಂದು ಪ್ರಕರಣ ದಾಖಲಿಸಿದ್ದರು.

ಆದರೆ ಪೊಲೀಸ್ ತನಿಖೆ ಮುಂದುವರೆದಂತೆ ಕಥೆ ಬದಲಾಗಿದೆ. ಪೊಲೀಸರು ಘಟನಾ ಸ್ಥಳವನ್ನು ಸೂಕ್ಷ್ಮವಾಗಿ ಪರಿಶೀಲಿಸಿದ್ದಾರೆ. ಸುತ್ತಮುತ್ತಲಿನ ಸಿಸಿಟಿವಿ ದೃಶ್ಯಾವಳಿಗಳು, ಮೊಬೈಲ್ ಕರೆ ವಿವರಗಳು, ಟವರ್ ಸ್ಥಳ ಮತ್ತು ಇತರ ತಾಂತ್ರಿಕ ಪುರಾವೆಗಳನ್ನು ವಿಶ್ಲೇಷಿಸಿದ್ದಾರೆ. ತನಿಖೆಯಲ್ಲಿ ಅನುಮಾನಾಸ್ಪದ ಯುವಕನೊಬ್ಬನ ಚಲನವಲನಗಳು ಕಂಡುಬಂದಿದ್ದು, ಬೇಸಿಗೆಯ ಬಿಸಿಲಿನಲ್ಲಿ ಹೂಡಿ ಧರಿಸಿ, ಹೆಡ್‌ಫೋನ್‌ಗಳೊಂದಿಗೆ ಮುಖ ಮುಚ್ಚಿಕೊಂಡು ಸುತ್ತಾಡುತ್ತಿದ್ದ ಯುವಕನ ದೃಶ್ಯಗಳು ಪೊಲೀಸರ ಗಮನ ಸೆಳೆದಿದೆ.

ಅಂದ್ರೆ ಸಿಯಾಳಿಗೆ ಮನೆಯವರು ನಿಶ್ಚಯಿಸಿದ್ದ ಕೇತನ್ ಜೊತೆ ಮದುವೆಯಾಗಲು ಇಷ್ಟವಿರಲಿಲ್ಲ. ತಾನು ಪ್ರೀತಿಸುತ್ತಿದ್ದ ಚೇತನ್ ಚೌಧರಿ ಜೊತೆ ಬಾಳಲು ಕೇತನ್ ಅಡ್ಡಿಯಾಗಿದ್ದಾನೆಂದು ಭಾವಿಸಿ ಇಬ್ಬರೂ ಸೇರಿ ಈ ಕೊಲೆಗೆ ಸಂಚು ರೂಪಿಸಿದ್ದರು. ಕೋಟೆಯ ತುದಿಗೆ ಬಂದಾಗ ಸಿಯಾ ತನ್ನ ಪ್ರಿಯಕರ ಚೇತನ್‌ನನ್ನು ರಹಸ್ಯವಾಗಿ ಅಲ್ಲಿಗೆ ಕರೆಸಿಕೊಂಡಿದ್ದಳು. ಬಳಿಕ ಇಬ್ಬರೂ ಸೇರಿ ಕೇತನ್‌ನನ್ನು ಕಂದಕಕ್ಕೆ ತಳ್ಳಿದ್ದಾರೆ ಎಂಬುದು ಬಯಲಾಗಿದೆ.

ರಿಯಲ್ ಎಸ್ಟೇಟ್ ಉದ್ಯಮಿಯಾಗಿದ್ದ ಕೇತನ್ ಮತ್ತು ಸಿಯಾ ವಿವಾಹ ಈ ವರ್ಷದ ನವೆಂಬರ್‌ನಲ್ಲಿ ನಿಗದಿಯಾಗಿತ್ತು. ಈ ಸಂಬಂಧ ಕುಟುಂಬಗಳು ರಾಜಸ್ಥಾನದ ಅರಮನೆಯೊಂದರಲ್ಲಿ ಅದ್ಧೂರಿ ಮದುವೆಗೆ ಸಕಲ ಸಿದ್ಧತೆಗಳನ್ನೂ ಮಾಡಿಕೊಂಡಿದ್ದವು. ಈಗ ಅಪಘಾತ ಎಂದು ನಂಬಿದ್ದ ಮಗನ ಸಾವು, ಮದುವೆಯಾಗಬೇಕಿದ್ದ ಹುಡುಗಿಯಿಂದಲೇ ನಡೆದ ಕ್ರೂರ ಕೊಲೆ ಎಂದು ತಿಳಿದುಬಂದಿರುವುದು ಕೇತನ್ ಕುಟುಂಬವನ್ನು ತೀವ್ರ ಆಘಾತಕ್ಕೀಡು ಮಾಡಿದೆ. ಆರೋಪಿಗಳಿಬ್ಬರನ್ನೂ ವಶಕ್ಕೆ ಪಡೆದಿರುವ ಪುಣೆ ಗ್ರಾಮಾಂತರ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.