ಶನಿವಾರ, 24 ಅಕ್ಟೋಬರ್ 2026

ವಿನಯ್‌ ಕುಲಕರ್ಣಿ ವಿರುದ್ಧದ ಕೊಲೆ ಕೇಸು ತೀರ್ಪು ಇಂದು ಪ್ರಕಟ

Vinay Kulkarni

ಬೆಂಗಳೂರು ಎ.9: ಮಾಜಿ ಸಚಿವ ಹಾಗೂ ಶಾಸಕ ವಿನಯ್‌ ಕುಲಕರ್ಣಿ ಅವರು ಆರೋಪಿಯಾಗಿರುವ ಧಾರವಾಡ ಜಿಪಂ ಮಾಜಿ ಸದಸ್ಯ ಯೋಗೇಶ್‌ ಗೌಡ ಕೊಲೆ ಪ್ರಕರಣದ ವಿಚಾರಣೆ ಪೂರ್ಣಗೊಳಿಸಿರುವ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಗುರುವಾರ ಅಂತಿಮ ತೀರ್ಪು ಪ್ರಕಟ ಮಾಡಲಿದೆ.

ವಿನಯ್‌ ಕುಲಕರ್ಣಿ ಸೇರಿ ಒಟ್ಟು 21 ಮಂದಿ ಆರೋಪಿಗಳ ಭವಿಷ್ಯ ನಿರ್ಧಾರವಾಗಲಿದೆ. ಸುಮಾರು 8 ವರ್ಷಗಳ ಕಾಲ ಸುದೀರ್ಘ ವಿಚಾರಣೆ ನಡೆಸಿದ ನ್ಯಾಯಾಲಯವು ಅಂತಿಮ ಆದೇಶ ನೀಡಲಿದೆ.