ಶನಿವಾರ, 24 ಅಕ್ಟೋಬರ್ 2026

ಕಲಬುರಗಿ ಸೆಂಟ್ರಲ್‌ ಜೈಲಿನಿಂದ ಮೂವರು ಕೈದಿಗಳು ಪರಾರಿ

Crime

ರಾಜ್ಯದ ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಅವರ ತವರು ಜಿಲ್ಲೆಯಾದ ಕಲಬುರಗಿಯ ಕೇಂದ್ರ ಕಾರಾಗೃಹದಿಂದ ಮೂವರು ಕೈದಿಗಳು ಗೋಡೆ ಹಾರಿ ಪರಾರಿಯಾಗಿರುವ ಘಟನೆ ನಡೆದಿದೆ. ಇದು ಜೈಲಿನ ಭದ್ರತಾ ವ್ಯವಸ್ಥೆಯ ಗಂಭಿರ ಲೋಪವಾಗಿದೆ.

ಮಂಗಳವಾರ ನಸುಕಿನ ಜಾವ ಸುಮಾರು 3 ಗಂಟೆಯ ವೇಳೆಗೆ ಮಸ್ತಾನ್‌, ಸಂತೋಷ್‌ ಮತ್ತು ಸಾಗರ್‌ ಎಂಬ ಮೂವರು ಕೈದಿಗಳು ಜೈಲಿನ ಎತ್ತರದ ಕಾಂಪೌಂಡ್‌ ಗೋಡೆ ಹಾರಿ ತಪ್ಪಿಸಿಕೊಂಡಿದ್ದಾರೆ.

ಜೈಲು ಸಿಬ್ಬಂದಿ ಹಾಗೂ ಸ್ಥಳೀಯ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ತೀವ್ರ ಶೋಧ ಕಾರ್ಯ ಕೈಗೊಂಡಿದ್ದಾರೆ. ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು, ಸಿಸಿಟಿವಿ ದೃಶ್ಯಾವಳಿಗಳನ್ನು ಗಮನಿಸುತ್ತಿದ್ದಾರೆ. ಪೊಲೀಸರು ಎಲ್ಲಾ ಆಯಾಮಗಳಲ್ಲೂ ತನಿಖೆ ನಡೆಸುತ್ತಿರುವುದಾಗಿ ವರದಿಯಾಗಿದೆ.