ಸೋಮವಾರ, 26 ಅಕ್ಟೋಬರ್ 2026
Trending

ಲೋಕಾಯುಕ್ತ ಬಲೆಗೆ ಉಡುಪಿ ಅಬಕಾರಿ ಡಿಸಿ

Image Credit: Tv9 Kannada

ಉಡುಪಿ: ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾ ಅಬಕಾರಿ ಉಪ ಆಯುಕ್ತ (ಡಿಸಿ) ಶ್ರೀನಿವಾಸ್‌ ಟಿ.ಎಂ ಅವರಿಗೆ ಸೇರಿದ 15 ವಿವಿಧ ಸ್ಥಳಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ಸರಣಿ ದಾಳಿ ನಡೆಸಿದ್ದು, ಈ ಕಾರ್ಯಾಚರಣೆಯಲ್ಲಿ ಒಟ್ಟು 8 ಕೋಟಿ 69 ಲಕ್ಷ ರೂ. ಮೌಲ್ಯದ ಆಸ್ತಿ ಪತ್ತೆಯಾಗಿರುವ ಕುರಿತು ವರದಿಯಾಗಿದೆ.

Sponsored

ಲೋಕಾಯುಕ್ತ ಮಂಗಳೂರು ವಿಭಾಗದ ಎಸ್ಪಿ ದಿನೇಶ್‌ ಕುಮಾರ್‌ ಅವರ ನೇತೃತ್ವದಲ್ಲಿ ಈ ದಾಳಿ ನಡೆದಿದ್ದು, ಶ್ರೀನಿವಾಸ್‌ ಟಿ.ಎಂ ಅವರಿಗೆ ಸಂಬಂಧಪಟ್ಟ ಆಸ್ತಿಗಳನ್ನು ಪತ್ತೆ ಮಾಡಲಾಗಿದೆ. 11 ನಿವೇಶನಗಳು, ಆರು ಸುಸಜ್ಜಿತ ವಾಸದ ಮನೆಗಳು, 31 ಎಕರೆ ಕೃಷಿ ಭೂಮಿ ಇದೆ. 1.47 ಕೋಟಿ ರೂ ಮೌಲ್ಯದ ಚಿನ್ನದ ಆಭರಣಗಳು, 17 ಲಕ್ಷ ರೂ. ಬೆಲೆಬಾಳುವ ಕಾರುಗಳು, 25.75 ಲಕ್ಷ ರೂ ನಗದು ಠೇವಣಿ, 72.68 ಲಕ್ಷ ರೂ ಮೌಲ್ಯದ ಬೆಲೆಬಾಳುವ ಗೃಹಪಯೋಗಿ ವಸ್ತುಗಳು ಪತ್ತೆಯಾಗಿದೆ.