Home Crime Brahmavara ವಿಶಾಲ ಗಾಣಿಗ ಕೊಲೆ ಪ್ರಕರಣ, ಮತ್ತೋರ್ವ ಆರೋಪಿ ಬಂಧನ!

Brahmavara ವಿಶಾಲ ಗಾಣಿಗ ಕೊಲೆ ಪ್ರಕರಣ, ಮತ್ತೋರ್ವ ಆರೋಪಿ ಬಂಧನ!

Hindu neighbor gifts plot of land

Hindu neighbour gifts land to Muslim journalist

Brahmavara: ಬ್ರಹ್ಮಾವರದ ವಿಶಾಲ ಗಾಣಿಗ ಕೊಲೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಕೊನೆಗೂ ಬಂಧಿಸಲಾಗಿದೆ. ಮೂರು ವರ್ಷಗಳ ಹಿಂದೆ ಕರಾವಳಿಯಲ್ಲಿ ಸಂಚಲನವನ್ನೇ ಮೂಡಿಸಿದ್ದ ಕೊಲೆ ಪ್ರಕರಣದ ಆರೋಪಿಯನ್ನು ಬ್ರಹ್ಮಾವರ ಪೊಲೀಸರು ಲಕ್ನೋದಲ್ಲಿ ಬಂಧನ ಮಾಡಿದ್ದಾರೆ.

ಧರ್ಮೇಂದ್ರ ಕುಮಾರ್‌ ಸುಹಾನಿ ಎಂಬ ಆರೋಪಿಯನ್ನು ಬಂಧಿಸಲಾಗಿದೆ.

ವಿಶಾಲ ಗಾಣಿಗ ಅವರ ಕೊಲೆಯು 2021ನೇ ಜುಲೈ ತಿಂಗಳಲ್ಲಿ ಬ್ರಹ್ಮಾವರ ಠಾಣಾ ವ್ಯಾಪ್ತಿಯ ಕುಮ್ರಗೋಡುವಿನಲ್ಲಿರುವ ಮಿಲನ ರೆಸಿಡೆನ್ಸಿಯಲ್ಲಿ ನಡೆದಿತ್ತು. ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿಗಳಾದ ವಿಶಾಲ ಗಾಣಿಗ ಅವರ ಗಂಡ ರಾಮಕೃಷ್ಣ, ಸ್ವಾಮಿನಾಥನ್‌ ನಿಷಾದ್‌, ರೋಹಿತ್‌ ರಾಣಾ ಪ್ರತಾಪ್‌ ಎಂಬುವವರನ್ನು ಬಂಧಿಸಲಾಗಿತ್ತು.

ಆದರೆ ಕೊಲೆಗೆ ಸಹಕರಿಸಿದ ಇನ್ನೋರ್ವ ಆರೋಪಿ ಧರ್ಮೇಂದ್ರ ಕುಮಾರ್‌ ಸುಹಾನಿ ಮೂವರು ವರ್ಷಗಳಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ. ಈತನ ಪತ್ತೆಗೆ ಬ್ರಹ್ಮಾವರ ಠಾಣಾ ಪೊಲೀಸರು ಬಲೆ ಬೀಸಿದ್ದು, ಫೆ.02 ರಂದು ಲಕ್ನೋ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆದು ಫೆ.03 ರಂದು ನ್ಯಾಯಾಲಯದ ಮುಂದೆ ಹಾಜರುಪಡಿಸಿ ನ್ಯಾಯಾಂಗ ಬಂಧನದಲ್ಲಿರಿಸಲಾಗಿದೆ ಎಂದು ವರದಿಯಗಿದೆ.