ಉಡುಪಿ: ಶಾರ್ಜಾದಲ್ಲಿ ಉಡುಪಿ ಮೂಲದ ವ್ಯಕ್ತಿಯ ಹತ್ಯೆ ಕುರಿತು ಮಾಧ್ಯಮದಲ್ಲಿ ಪ್ರಸಾರವಾಗುತ್ತಿರುವ ಸುದ್ದಿಯ ಕುರಿತು ಉಡುಪಿ ಪೊಲೀಸರು ಸ್ಪಷ್ಟೀಕರಣ ನೀಡಿದ್ದಾರೆ.
ಕೆಲವು ಸ್ಥಳೀಯ ಹಾಗೂ ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿದ್ದು, ಈ ಘಟನೆಗೆ ಕುರಿತಂತೆ ಶಾರ್ಜಾ ಪೊಲೀಸ್ ಇಲಾಖೆ ಅಥವಾ ಯುಎಇಯಲ್ಲಿರುವ ಭಾರತೀಯ ರಾಯಭಾರ ಕಚೇರಿ/ಕಾನ್ಸುಲೇಟ್ ವತಿಯಿಂದ ಉಡುಪಿ ಜಿಲ್ಲಾ ಪೊಲೀಸರಿಗೆ ಯಾವುದೇ ಅಧಿಕೃತ ಮಾಹಿತಿ ಅಥವಾ ದೃಢೀಕರಣ ಲಭ್ಯವಾಗಿಲ್ಲ ಎಂದು ಪೊಲೀಸರು ಹೇಳಿದ್ದಾರೆ.
ಈ ಪ್ರಕರಣಕ್ಕೆ ಕುರಿತಂತೆ ಯಾವುದೇ ಅಧಿಕೃತ ಮಾಹಿತಿ ಉಡುಪಿ ಜಿಲ್ಲಾ ಪೊಲೀಸರಿಗೆ ಲಭ್ಯವಾದಲ್ಲಿ, ಪರಿಶೀಲಿಸಿ ನಂತರ ಮಾಧ್ಯಮಗಳ ಜೊತೆ ಹಂಚಿಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.




