# ಉಡುಪಿ: ಪ್ರದೀಪ್‌ ಪೂಜಾರಿ ಪ್ರಕರಣ, ಪೊಲೀಸ್‌ ಸಿಬ್ಬಂದಿ ವಿರುದ್ಧ ಕ್ರಮ

- Link: https://hosakannada.com/crime/udupi-pradeep-poojari-case-action-against-police-personnel/
- Published: 2026-11-06T08:28:13+00:00
- Author: ಹೊಸಕನ್ನಡ ನ್ಯೂಸ್

ಉಡುಪಿ: ಹಿರಿಯಡ್ಕದ ಪ್ರದೀಪ್‌ ಪೂಜಾರಿ ಆತ್ಮಹತ್ಯೆ ಪ್ರಕರಣದ ನಿರ್ವಹಣೆಯಲ್ಲಿ ಕರ್ತವ್ಯಲೋಪ ಎಸಗಿರುವ
ಪೊಲೀಸ್‌ ಅಧಿಕಾರಿಗಳು ಹಾಗೂ ಸಿಬ್ಬಂದಿ ವಿರುದ್ಧ ಉಡುಪಿ ಜಿಲ್ಲಾ ಪೊಲೀಸ್‌ ಇಲಾಖೆ ಶಿಸ್ತು ಕ್ರಮ 
ಕೈಗೊಂಡಿದೆ.

Sponsored

ಹಿರಿಯಡ್ಕ ಪೊಲೀಸ್‌ ಠಾಣೆಯ ಪಿಎಸ್‌ಐ ಅವರನ್ನು ಪಶ್ಚಿಮ ವಲಯ ಡಿಐಜಿ ಕಚೇರಿಗೆ ಲಗತ್ತಿಸಲಾಗಿದ್ದು,
ಅವರ ವಿರುದ್ಧ ಇಲಾಖಾ ಶಿಸ್ತು ಕ್ರಮ ಆರಂಭಿಸಲಾಗಿದೆ ಎಂದು ಉಡುಪಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ
ಹರಿರಾಮ್‌ ಶಂಕರ್‌ ನ.6 (ಶುಕ್ರವಾರ) ತಿಳಿಸಿದ್ದಾರೆ.

Advertisement

Advertisement

ಪ್ರದೀಪ್‌ ಪೂಜಾರಿ ಒಳರೋಗಿಯಾಗಿ ಚಿಕಿತ್ಸೆ ಪಡೆಯುತ್ತಿದ್ದ ಸಂದರ್ಭದಲ್ಲಿ ಭದ್ರತಾ ಕರ್ತವ್ಯದಲ್ಲಿದ್ದ
ಇಬ್ಬರು ಪೊಲೀಸ್‌ ಸಿಬ್ಬಂದಿಯನ್ನೂ ಅಮಾನತು ಮಾಡಲಾಗಿದೆ.

ಪ್ರದೀಪ್‌ ಪೂಜಾರಿ ಮೇಲೆ ಹಲ್ಲೆ ನಡೆದ ನಂತರ ಅವರು ನೀಡಿದ್ದ ದೂರಿನ ಮೇರೆಗೆ ಎಫ್‌ಐಆರ್‌ ದಾಖಲಿಸುವ
ಬದಲು ಎನ್‌ಸಿ ಪ್ರಕರಣ ದಾಖಲಿಸಿಕೊಂಡಿದ್ದ ಹಿರಿಯಡ್ಕ ಠಾಣೆಯ ಪಿಎಸ್‌ಐ ವಿರುದ್ಧ ಈ ಹಿಂದೆ ಇಲಾಖಾ 
ವಿಚಾರಣೆ ಆರಂಭ ಮಾಡಲಾಗಿತ್ತು. ಇದೀಗ ಹೆಚ್ಚುವರಿ ಎಸ್ಪಿ ಅವರ ವಿಚಾರಣಾ ವರದಿಯ ಆಧಾರದಲ್ಲಿ ಮುಂದಿನ
ಕ್ರಮ ಕೈಗೊಳ್ಳಲಾಗಿದೆ.

ಪ್ರದೀಪ್‌ ಪೂಜಾರಿ ಸಾವಿನ ಪ್ರಕರಣಕ್ಕೆ ಕುರಿತಂತೆ ಪೊಲೀಸ್‌ ಇಲಖೆಯ ಕರ್ತವ್ಯಲೋಪದ ಕುರಿತು ಸಾರ್ವಜನಿಕ
ವಲಯದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ವಿವಿಧ ಸಂಘಟನೆಗಳು ಜಿಲ್ಲಾಧಿಕಾರಿ ಕಚೇರಿ ಎದುರು 
ಪ್ರತಿಭಟನೆ ಮಾಡಿ, ಕರ್ತವ್ಯದಲ್ಲಿದ್ದ ಪೊಲೀಸ್‌ ಸಿಬ್ಬಂದಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹ
ಮಾಡಿದ್ದವು.

ಈ ಹಿನ್ನೆಲೆಯಲ್ಲಿ ಪೊಲೀಸ್‌ ಇಲಾಖೆ ಆಂತರಿಕ ವಿಚಾರಣೆ ಮಾಡಿ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಸಿಬ್ಬಂದಿ
ವಿರುದ್ಧ ಕ್ರಮಕ್ಕೆ ಮುಂದಾಗಿದೆ ಎಂದು ಹರಿರಾಮ್‌ ಶಂಕರ್‌ ತಿಳಿಸಿದ್ದಾರೆ.

Advertisement
