Home Crime Ullala: ಕಾರು ಡಿಕ್ಕಿ ಹೊಡೆದು ಬಿಜೆಪಿ ಕಾರ್ಯಕರ್ತ ಸಾವು

Ullala: ಕಾರು ಡಿಕ್ಕಿ ಹೊಡೆದು ಬಿಜೆಪಿ ಕಾರ್ಯಕರ್ತ ಸಾವು

Ullala

Hindu neighbor gifts plot of land

Hindu neighbour gifts land to Muslim journalist

Ullala: ಕೋಟೆಕಾರು ಅಡ್ಕ ಬಳಿ ಹೆದ್ದಾರಿ ದಾಟುತ್ತಿರುವ ಸಂದರ್ಭದಲ್ಲಿ ವ್ಯಕ್ತಿಯೋರ್ವರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಮೃತಪಟ್ಟ ಘಟನೆಯೊಂದು ಶುಕ್ರವಾರ ನಡೆದಿದೆ.

ಇದನ್ನೂ ಓದಿ: CoviShield Vaccine: ಪುನೀತ್ ರಾಜಕುಮಾರ್ ಸಾವಿಗೆ ಕೊರೋನ ವ್ಯಾಕ್ಸಿನ್ ಕಾರಣವೇ ?! ಅಸಲಿ ಸತ್ಯ ಬಿಚ್ಚಿಟ್ಟ ಡಾ. ಅಂಜನಪ್ಪ

ಕೋಟೆಕಾರು ನೆಲ್ಲಿಸ್ಥಳ ಕಾಳಿಕಾಂಬ ದೇವಸ್ಥಾನದ ಬಳಿಯ ನಿವಾಸಿ ಶ್ರೀಕಾಂತ್‌ (46) ಎಂಬುವವರೇ ಮೃತಪಟ್ಟವರು.

ಹೆದ್ದಾರಿ ದಾಟುತ್ತಿದ್ದ ಸಂದರ್ಭದಲ್ಲಿ ಕೇರಳದಿಂದ ಬರುತ್ತಿದ್ದ ಕಾರು ಡಿಕ್ಕಿ ಹೊಡೆದಿದೆ. ಶ್ರೀಕಾಂತ್‌ ಅವರಿಗೆ ಗಂಭೀರ ಗಾಯವಾಗಿದ್ದು, ಅಪಘಾತ ನಡೆಸಿದ ಕಾರು ಚಾಲಕನೇ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಸೇರಿಸಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೇ ಶ್ರೀಕಾಂತ್‌ ಅವರು ಮೃತ ಹೊಂದಿದ್ದಾರೆ.

ಇದನ್ನೂ ಓದಿ: Dharwad: ಬಾಲಕಿಗೆ ಲೈಂಗಿಕ ದೌರ್ಜನ್ಯ; ಪೊಲೀಸರ ಮೇಲೆಯೇ ಹಲ್ಲೆ, ಆರೋಪಿ ಸದ್ದಾಂ ಹುಸೇನ್‌ಗೆ ಗುಂಡೇಟು

ಶ್ರೀಕಾಂತ್‌ ಅವರು ಆಟೋ ಎಲೆಕ್ಟ್ರಿಷಿಯನ್‌ ಕೆಲಸ ಮಾಡುತ್ತಿದ್ದು, ಇವರು ಬಿಜೆಪಿಯ ಸಕ್ರಿಯ ಕಾರ್ಯಕರ್ತರಾಗಿದ್ದರು. ಅವಿವಾಹಿತರಾಗಿದ್ದ ಇವರು ತಾಯಿ, ಇಬ್ಬರು ಸಹೋದರಿಯರನ್ನು ಅಗಲಿದ್ದಾರೆ. ಈ ಘಟನೆ ಸಂಬಂಧ ಮಂಗಳೂರು ದಕ್ಷಿಣ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.