Home » ಉಪ್ಪಿನಂಗಡಿ: ಮನೆಯಿಂದ 6 ಲಕ್ಷ ರೂ.ಗಳ ಚಿನ್ನಾಭರಣ ಕಳವು

ಉಪ್ಪಿನಂಗಡಿ: ಮನೆಯಿಂದ 6 ಲಕ್ಷ ರೂ.ಗಳ ಚಿನ್ನಾಭರಣ ಕಳವು

0 comments

ನೆಲ್ಯಾಡಿ: ಮನೆ ಮಂದಿ ಚರ್ಚ್‌ಗೆ ಹಬ್ಬಕ್ಕೆ ಹೋಗಿದ್ದ ಸಂದರ್ಭದಲ್ಲಿ ಕಳ್ಳರು ಮನೆಗೆ ನುಗ್ಗಿದ್ದು, ಅಂದಾಜು 6 ಲಕ್ಷ ರೂ. ಮೌಲ್ಯದ 75 ಗ್ರಾಂ ಚಿನ್ನಾಭರಣ ಕಳವು ಮಾಡಿರುವ ಘಟನೆ ಕಡಬ ತಾಲೂಕಿನ ಶಿರಾಡಿ ಗ್ರಾಮದ ಅಡ್ಡಹೊಳೆ ಎಂಬಲ್ಲಿ ಅ.1 ರಂದು ರಾತ್ರಿ ನಡೆದಿದೆ.

ಶಾಲಿನಿ ಎನ್ನುವವರ ಮನೆಯಲ್ಲಿ ಕಳ್ಳತನ ನಡೆದಿದೆ. ಅ.1 ರಂದು ಸಂಜೆ 6 ಗಂಟೆಗೆ ಮನೆಗೆ ಬೀಗ ಹಾಕಿ ಅಡ್ಡಹೊಳೆ ಚರ್ಚ್‌ನಲ್ಲಿ ನಡೆಯುತ್ತಿದ್ದ ಹಬ್ಬಕ್ಕೆ ಹೋಗಿದ್ದು, ರಾತ್ರಿ 10 ಕ್ಕೆ ಮನೆಗೆ ಹಿಂತಿರುಗಿದ್ದು, ಕಳ್ಳತನ ನಡೆದಿರುವುದು ಕಂಡು ಬಂದಿದೆ. ಮನೆಯ ಹಿಂಬದಿ ಬಾಗಿಲಿನ ಬೀಗವನ್ನು ಬಲವಂತವಾಗಿ ಮುರಿದು ಕಳ್ಳರು ಮನೆಯೊಳಗೆ ಪ್ರವೇಶ ಮಾಡಿ ಕಳ್ಳತನ ಮಾಡಿದ್ದಾರೆ.

ಶಾಲಿನಿ ಅವರು ನೀಡಿರುವ ದೂರಿನ ಮೇರೆಗೆ ಉಪ್ಪಿನಂಗಡಿ ಪೊಲೀಸರು ಪ್ರಕರಣ ದಾಖಲು ಮಾಡಿದ್ದಾರೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

You may also like