Home Crime Uttar Pradesh: ಕಿವಿ ಕೇಳದ ಮಾತು ಬಾರದ 11 ರ ಬಾಲಕಿ ಮೇಲೆ ಅತ್ಯಾಚಾರ; ಸಿಗರೇಟ್‌ನಿಂದ...

Uttar Pradesh: ಕಿವಿ ಕೇಳದ ಮಾತು ಬಾರದ 11 ರ ಬಾಲಕಿ ಮೇಲೆ ಅತ್ಯಾಚಾರ; ಸಿಗರೇಟ್‌ನಿಂದ ಖಾಸಗಿ ಭಾಗ ಸುಟ್ಟು ವಿಕೃತಿ!

Hindu neighbor gifts plot of land

Hindu neighbour gifts land to Muslim journalist

Uttar Pradesh: ಕಿವಿ ಕೇಳದ ಮಾತು ಬಾರದ 11 ರ ಬಾಲಕಿ ಮೇಲೆ ಅತ್ಯಾಚಾರ ಮಾಡಿ, ಆಕೆಯ ಖಾಸಗಿ ಭಾಗಗಳಿಗೆ ಸಿಗರೇಟ್‌ನಿಂದ ಸುಟ್ಟು ವಿಕೃತಿ ಮೆರೆದಿರುವ ಘಟನೆ ಉತ್ತರಪ್ರದೇಶದ ರಾಂಪುರ್‌ನಲ್ಲಿ ನಡೆದಿದೆ. ಪ್ರಾಥಮಿಕ ಮಾಹಿತಿಗಳ ಮೂಲಕ ಈ ಕೃತ್ಯ ಒಂದಕ್ಕಿಂತ ಹೆಚ್ಚು ಆರೋಪಿಗಳಿಂದ ನಡೆದಿದೆ ಎನ್ನಲಾಗಿದೆ.

ಬಾಲಕಿಯ ವಿವಿಧ ಭಾಗಗಳಲ್ಲಿ ಕಚ್ಚಿದ , ಖಾಸಗಿ ಭಾಗಗಳಿಗೆ ಸಿಗರೇಟ್‌ನಿಂದ ಸುಟ್ಟ ಗುರುತು ಪತ್ತೆಯಾಗಿರುವ ಕುರಿತು ಪೊಲೀಸರು ತಿಳಿಸಿದ್ದಾರೆ. ಈ ಪ್ರಕರಣ ಸಂಬಂಧ ಓರ್ವ ಶಂಕಿತನನ್ನು ಬಂಧನ ಮಾಡಿ ವಿಚಾರಣೆಗೆ ಒಳಪಡಿಸಲಾಗಿದೆ.

ವೈದ್ಯಕೀಯ ಪರೀಕ್ಷೆ ಪೂರ್ಣಗೊಂಡಿದ್ದು, ಬಾಲಕಿ ಭಯಭೀತಳಾಗಿದ್ದರಿಂದ ಆಕೆಯನ್ನು ಪುನರ್ವಸತಿ ಕೇಂದ್ರಕ್ಕೆ ಕಳುಹಿಸಲಾಗಿದೆ. ಬಾಲಕಿಗೆ ಕೃತ್ಯ ನಡೆದ ಆತಂಕದಿಂದ ಫಿಟ್ಸ್‌ ಬರುತ್ತಿದೆ ಎಂದು ಆಕೆಯ ತಾಯಿ ಪೊಲೀಸರಲ್ಲಿ ಹೇಳಿದ್ದಾರೆ.