Home Crime Vitla: ವಿಟ್ಲ; ರಸ್ತೆ ವಿವಾದ; ಮಹಿಳೆಗೆ ಚಡ್ಡಿ ಜಾರಿಸಿ ಗುಪ್ತಾಂಗ ತೋರಿಸಿದ ವ್ಯಕ್ತಿ; ಪ್ರಕರಣ ದಾಖಲು!

Vitla: ವಿಟ್ಲ; ರಸ್ತೆ ವಿವಾದ; ಮಹಿಳೆಗೆ ಚಡ್ಡಿ ಜಾರಿಸಿ ಗುಪ್ತಾಂಗ ತೋರಿಸಿದ ವ್ಯಕ್ತಿ; ಪ್ರಕರಣ ದಾಖಲು!

Hindu neighbor gifts plot of land

Hindu neighbour gifts land to Muslim journalist

Vitla: ಇಡ್ಕಿದು ಗ್ರಾಮದ ಕೊಪ್ಪ ಎಂಬಲ್ಲಿ ಮನೆಗೆ ಹೋಗುವ ರಸ್ತೆಯಲ್ಲಿ ಗೇಟ್‌ಗೆ ಬೀಗ ಹಾಕುವ ಸಂದರ್ಭ ವಿಚಾರಿಸಲು ಬಂದ ಮಹಿಳೆಗೆ ಅಸಭ್ಯ ವರ್ತನೆ ತೋರಿಸಿ ವಿಕೃತಿ ಮೆರೆದ ಘಟನೆ ನಡೆದಿದೆ.

ಆರೋಪಿ ಗ್ರಾಮ ಪಂಚಾಯತ್‌ ಉಪಾಧ್ಯಕ್ಷ ಪದ್ಮನಾಭ ಸಪಲ್ಯ ಎಂದು ವರದಿಯಾಗಿದೆ. ಈತ ಮಹಿಳೆಗೆ ಚಡ್ಡಿ ಜಾರಿಸಿ ಗುಪ್ತಾಂಗ ತೋರಿಸಿರುವ ಘಟನೆ ನಡೆದಿದೆ.

ತೋಟದಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆ ತನ್ನ ಮನೆಗೆ ಬರುವ ದಾರಿಯಲ್ಲಿ ಯಾರೋ ಕೆಲಸ ಮಾಡುವ ಶಬ್ದ ಕೇಳಿದ ಹಿನ್ನೆಲೆ ಸ್ಥಳಕ್ಕೆ ತೆರಳಿ ವಿಡಿಯೋ ಮಾಡಿದ್ದಾರೆ. ಇದನ್ನು ನೋಡಿದ ಆರೋಪಿ ಪದ್ಮನಾಭ ತಾನು ಧರಿಸಿದ್ದ ಚಡ್ಡಿ ಜಾರಿಸಿ ಗುಪ್ತಾಂಗ ತೋರಿಸುವ ವಿಕೃತಿ ಮೆರೆದಿದ್ದಾನೆ ಎಂದು ದೂರಿನಲ್ಲಿ ಹೇಳಲಾಗಿದೆ.

ಈ ಕುರಿತು ವಿಟ್ಲ ಠಾಣೆಯಲ್ಲಿ ದೂರು ದಾಖಲಾಗಿದೆ. ಭಾರತೀಯ ನ್ಯಾಯ ಸಂಹಿತೆ BNS 2023 u/s 79 ರಂತೆ ಪ್ರಕರಣ ದಾಖಲಾಗಿರುವ ಕುರಿತು ವರದಿಯಾಗಿದೆ.