ವಿಟ್ಲ: ಕೇರಳ ಮೂಲದ ಕಾನೂನು ಸಂಘರ್ಷಕ್ಕೆ ಒಳಗಾದ ಬಾಲಕನೋರ್ವ ಅಪ್ರಾಪ್ತ ಬಾಲಕಿಯ ಪರಿಚಯ ಮಾಡಿಕೊಂಡು ಮನೆಗೆ ಕರೆಸಿಕೊಂಡು ಲೈಂಗಿಕ ದೌರ್ಜನ್ಯವೆಸಗಿರುವ ಆರೋಪದಲ್ಲಿ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
2025 ರ ಡಿ.21 ರಂದು ಬಾಲಕಿಯು ಆರೋಪಿತ ಬಾಲಕನ ಮನೆಗೆ ತೆರಳಿದ್ದ ಸಂದರ್ಭದಲ್ಲಿ ಲೈಂಗಿಕ ದೌರ್ಜನ್ಯ ನಡೆದಿರುವುದಾಗಿ ದೂರಿನಲ್ಲಿ ತಿಳಿಸಲಾಗಿದೆ. ಸೆ.8 ರಂದು ಬಾಲಕಿಯ ಆರೋಗ್ಯದಲ್ಲಿ ಏರುಪೇರಾಗಿದ್ದು, ಮನೆ ಮಂದಿ ಆಸ್ಪತ್ರೆಗೆ ದಾಖಲಿಸಿದ್ದು, ಸೆ.9 ರಂದು ಬಾಲಕಿಯು ಮಗುವಿಗೆ ಜನ್ಮ ನೀಡಿದ್ದಾಳೆ.
ಈ ಕುರಿತು ವಿಟ್ಲ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿಯಲ್ಲಿ ಶೂನ್ಯ ಅಪರಾಧ ಪ್ರಕರಣ ದಾಖಲಿಸಲಾಗಿದೆ.




