ಮಂಗಳವಾರ, 27 ಅಕ್ಟೋಬರ್ 2026
Trending

ವಿಟ್ಲ: ಬಸ್ಸಿನಲ್ಲಿ ಮಹಿಳೆಯ ಚಿನ್ನಾಭರಣ, ನಗದು ಕಳವು

ವಿಟ್ಲ: ಬಸ್ಸಿನಲ್ಲಿ ಪ್ರಯಾಣ ಮಾಡುತ್ತಿದ್ದ ಮಹಿಳೆಯ ಬ್ಯಾಗ್‌ನಲ್ಲಿದ್ದ ಚಿನ್ನಾಭರಣ, ನಗದು ಹಾಗೂ ಅಗತ್ಯ ದಾಖಲೆಗಳು ಕಳುವಾಗಿರುವ ಘಟನೆ ನಡೆದಿದೆ. ಈ ಕುರಿತು ವಿಟ್ಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Sponsored

ವಿಟ್ಲ ಸಮೀಪದ ಗ್ರಾಮದ ಪ್ರೇಮಾ (44) ಎಂಬುವರು ಪೊಲೀಸರಿಗೆ ದೂರು ನೀಡಿದ್ದಾರೆ.

Advertisement
Advertisement

ತಮ್ಮ ಇಬ್ಬರು ಮಕ್ಕಳ ಜೊತೆ ಪೆರ್ಲದಲ್ಲಿರುವ ತಾಯಿಯ ಮನೆಯಿಂದ ವಿಟ್ಲಕ್ಕೆ ಬಂದು ಅಲ್ಲಿಂದ ಮಂಗಳೂರಿಗೆ ತೆರಳುವ ಬಸ್ಸನ್ನು ಹತ್ತಿ ಕುಳಿತಿದ್ದು, ಈ ಸಂದರ್ಭದಲ್ಲಿ ಅವರ ಬ್ಯಾಗ್‌ ತೆರೆದಿದ್ದು ಅದರಲ್ಲಿ 64 ಗ್ರಾಂ ತೂಕದ ಚಿನ್ನಾಭರಣ, 3000ರೂ ನಗದು, ಎಟಿಎಂ ಕಾರ್ಡ್‌, ಪಾನ್‌ ಕಾರ್ಡ್‌ ಹಾಗೂ ಮತದಾರರ ಗುರುತಿನ ಚೀಟಿಗಳು ಕಳವಾಗಿರುವುದು ದೂರಿನಲ್ಲಿ ತಿಳಿಸಿದ್ದಾರೆ.

Advertisement