ಭಾನುವಾರ, 25 ಅಕ್ಟೋಬರ್ 2026
Trending

ಸೀರೆ ಬದಲು ನೈಟಿ ಧರಿಸಿದ್ದಕ್ಕೆ ಪತ್ನಿಗೆ ಬೆಂಕಿ ಹಚ್ಚಿದ ಪತಿ!

ಪತ್ನಿ ನೈಟಿ ಧರಿಸಿದ್ದಕ್ಕೆ ಪತಿಯೊಬ್ಬ ಬೆಂಕಿ ಹಚ್ಚಿರುವ ಘಟನೆ ಬೆಳಗಾವಿ ಜಿಲ್ಲೆಯ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ನಂದಗಡ ಪೊಲೀಸ್ ಠಾಣಾ ವ್ಯಾಪ್ತಿಯ ಗ್ರಾಮದಲ್ಲಿ ನಡೆದಿದೆ.

Sponsored

ಕೃಷ್ಣಾ ಪಾಟೀಲ್ ಪತ್ನಿಗೆ ಬೆಂಕಿ ಹಚ್ಚಿದ ನೀಚ ಗಂಡ. ಸುಟ್ಟ ಗಾಯಗಳಿಂದ ಗಾಯಗೊಂಡಿರುವ ಮಂಜುಳಾ ಪಾಟೀಲ್ ಅವರನ್ನು ಸ್ಥಳೀಯರು ರಕ್ಷಣೆ ಮಾಡಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಬೆಳಗಾವಿ ಬ್ರಿಮ್ಸ್ ಆಸ್ಪತ್ರೆಯಲ್ಲಿ ಮಂಜುಳಾ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.

ಕಳೆದ ಕೆಲವು ದಿನಗಳಿಂದ ಮಂಜುಳಾ ಮತ್ತು ಕೃಷ್ಣಾ ನಡುವೆ ನೈಟಿ ಧರಿಸುವ ವಿಚಾರಕ್ಕೆ ಜಗಳ ನಡೆಯುತ್ತಿತ್ತು ಎಂದು ತಿಳಿದು ಬಂದಿದೆ.

ಪತಿಯ ತೀವ್ರ ವಿರೋಧದ ನಡುವೆಯೂ ಮಂಜುಳಾ ನೈಟಿ ಧರಿಸಿದ್ದರು. ಇದರಿಂದ ಕೋಪಗೊಂಡ ಕೃಷ್ಣಾ ಪಾಟೀಲ್ ಪತ್ನಿಗೆ ಬೆಂಕಿ ಹಚ್ಚಿದ್ದಾನೆ.

ನಂದಗಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.