ಸೋಮವಾರ, 26 ಅಕ್ಟೋಬರ್ 2026
Trending

ಕಾಡುಹಂದಿ ಬೇಟೆಯಾಡಿ ಮಾಂಸ ದಾಸ್ತಾನು-ಆರೋಪಿ ಬಂಧನ

ಬೆಳ್ತಂಗಡಿ: ನೆರಿಯ ಗ್ರಾಮದ ಮುಚ್ಚರಾಳಿ ಎಂಬಲ್ಲಿ ಕಾಡುಹಂದಿಯನ್ನು ಬೇಟೆಯಾಡಿ ಮಾಂಸ ಮಾಡಿ ಮನೆಯ ಫ್ರಿಡ್ಜ್‌ನಲ್ಲಿ ದಾಸ್ತಾನು ಮಾಡಿಟ್ಟಿದ್ದ ಪ್ರಕರಣವನ್ನು ಬೆಳ್ತಂಗಡಿ ಅರಣ್ಯ ಇಲಾಖೆ ಕಂಡು ಹಿಡಿದಿದೆ. ಈ ಪ್ರಕರಣಕ್ಕೆ ಕುರಿತಂತೆ ನೆರಿಯ ಗ್ರಾಮದ ಮುಚ್ಚಳ್ಳಿ ನಿವಾಸಿ ಕುಕ್ಕಪ್ಪ ಗೌಡ ಮಗ ಸುರೇಶ್‌ ಎಂ.ಕೆ (38) ಎಂಬಾತನನ್ನು ಬಂಧನ ಮಾಡಲಾಗಿದೆ.

Sponsored

ಸೆ.21 ರಂದು ಬೆಳ್ತಂಗಡಿ ನ್ಯಾಯಾಲಯಕ್ಕೆ ಆರೋಪಿಯನ್ನು ಹಾರುಪಡಿಸಿದ್ದು, ಷರತ್ತು ಬದ್ಧ ಜಾಮೀನು ಮಂಜೂರು ಮಾಡಲಾಗಿದೆ. ಪ್ರಕರಣದ ತನಿಖೆ ಮುಂದುವರಿದಿದೆ.

Advertisement
Advertisement
Advertisement