

Crime: ಪೀಣ್ಯ ದಾಸರಹಳ್ಳಿ ಮನೆಯಲ್ಲಿ ಮಲಗಿದ್ದ ಅಕ್ಕ ಹಾಗೂ ತಾಯಿ, ತಂದೆಯ ಮೇಲೆ ಮಗನೇ ಇದ್ದಕ್ಕಿದ್ದಂತೆ ಚಾಕು ಹಿಡಿದು ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಸೋಲದೇವನಹಳ್ಳಿ ಪೊಲೀಸ್ ವ್ಯಾಪ್ತಿಯ ಮೇದರಹಳ್ಳಿ ಯಲ್ಲಿ ನಡೆದಿದೆ.
ಮೇದರಹಳ್ಳಿಯ ವಿನಾಯಕ ಲೇಔಟ್ ನಿವಾಸಿ ಕೃಷ್ಣಮೂರ್ತಿ (51) ಪಾರ್ವತಮ್ಮ (48) ನಯನಾ (24) ಹಲ್ಲೆಗೆ ಒಳ ಗಾದವರು.
ಹಲ್ಲೆ ನಡೆಸಿದ ಮಗ ಹರ್ಷ (22) ಇದೀಗ ಮಾನಸಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಗಾಯಗೊಂಡ ಮೂವರಿಗೆ ಸಪ್ತಗಿರಿ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ನಡೆಸಲಾಗಿದೆ. ಏ.15ರ ಬೆಳಗಿನ ಜಾವ 3 ಗಂಟೆ ಸುಮಾರಿಗೆ ದುರ್ಘಟನೆ ನಡೆದಿದ್ದು, ಹಲ್ಲೆ ಸಂದರ್ಭದಲ್ಲಿ ಹರ್ಷನಿಂದ ಬಚಾವಾಗಲು ಮನೆಯವರು ಕಾರದ ಪುಡಿಯನ್ನು ಎರಚಿದ್ದಾರೆ.
ಆದರೂ ಬಿಡದೆ ಹರ್ಷ ಚಾಕುವಿನಿಂದ ಹಲ್ಲೆ ಮುಂದುವರೆಸಿದ್ದ. ಮನೆಯೊಳಗೆ ಕಿರುಚಾಟ ಕೇಳಿ ನೆರೆಹೊರೆಯವರು ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಧಾವಿಸಿದ
ಡೋರ್ ಬಂದ್ ಮಾಡಿ ಕೃತ್ಯ: ತಾಯಿ ಕಳೆದ 2 ದಿನದ ಹಿಂದೆ ಹರ್ಷ, ಯಾಕೋ ಇತ್ತೀಚಿಗೆ ಭಯ ಆಗುತ್ತಿದೆ ಅಮ್ಮ ಅಂತ ಹೇಳಿದ್ದ. ಆಗ ಆಸ್ಪತ್ರೆಗೆ ಹೋಗುವ ಅಂತ ಕರೆದರೆ ನಿರಾಕರಿಸಿದ್ದ. ಏ.15ರ ಮುಂಜಾವು ಚಾಕು ಹಿಡಿದು ಏಕಾಏಕಿ ಗಲಾಟೆ ಮಾಡಿದ. ಆಗಬಚಾವ್ ಆಗಲು ಅಡುಗೆ ಮನೆಯಿಂದ ಖಾರದ ಪುಡಿ ಎರಚಿದ್ದೇವೆ. ನಾನು ಮನೆ ಯಿಂದ ಆಚೆ ಬರದಂತೆ ಮಗನೇ ಪೂರ್ವ ನಿಯೋಜಿತವಾಗಿ ಡೋಲಾಕ್ ಮಾಡಿ ಕೀ ಬಿಚ್ಚಿಟ್ಟದ್ದ. ಪೊಲೀಸರು ಬರದಿದ್ದರೆ ನಮ್ಮ ಜೀವ ಉಳಿಯುತ್ತಿರಲಿಲ್ಲ ಎಂದು ತಾಯಿ ಪಾರ್ವತಮ್ಮ ವಿವರಿಸಿದ್ದಾರೆ.
ಸೋಲದೇವನಹಳ್ಳಿ ಪೊಲೀಸರು ಬಾಗಿಲು ಒಡೆದು ಮನೆಯವರನ್ನು ರಕ್ಷಿಸಿದ್ದಾರೆ. ಈ ಸಂಬಂಧ ಸೋಲದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಯನಾ ಎಂಜಿನಿಯರಿಂಗ್ ಮುಗಿಸಿ ಕೆಲಸ ಹುಡುಕುತ್ತಿದ್ದು, ಆರೋಪಿ ಕೂಡ ಎಂಜಿನಿಯರಿಂಗ್ ಓದುತ್ತಿದ್ದ.













