Home Crime ಕರ್ನಾಟಕದ ಪ್ರತಿಷ್ಠಿತ ಮಠದ ಸ್ವಾಮೀಜಿಗೆ ಬ್ಲ್ಯಾಕ್‌ಮೇಲ್‌, ಹಣ ಗುಳುಂ: ಮಹಿಳೆಯ ಬಂಧನ

ಕರ್ನಾಟಕದ ಪ್ರತಿಷ್ಠಿತ ಮಠದ ಸ್ವಾಮೀಜಿಗೆ ಬ್ಲ್ಯಾಕ್‌ಮೇಲ್‌, ಹಣ ಗುಳುಂ: ಮಹಿಳೆಯ ಬಂಧನ

Hindu neighbor gifts plot of land

Hindu neighbour gifts land to Muslim journalist

ಬೆಂಗಳೂರು: ರಾಜ್ಯದ ಪ್ರತಿಷ್ಠಿತ ಮಠದ ಸ್ವಾಮೀಜಿಯೊಬ್ಬರಿಗೆ ಬ್ಲ್ಯಾಕ್‌ಮೇಲ್‌ ಮಾಡಿ ಹಣ ವಸೂಲಿ ಮಾಡಿದ ಆರೋಪದ ಮೇರೆಗೆ ಚಿಕ್ಕಮಗಳೂರು ಮೂಲದ ಸ್ಪೂರ್ತಿ ಎನ್ನುವ ಮಹಿಳೆಯನ್ನು ಬೆಂಗಳೂರು ಸಿಸಿಬಿ ಪೊಲೀಸರು ಬಂಧನ ಮಾಡಿದ್ದಾರೆ.

ಐದು ತಿಂಗಳ ಹಿಂದೆ ಸ್ವಾಮೀಜಿಗೆ ಕರೆ ಮಾಡಿದ ಸ್ಪೂರ್ತಿ, ತಿಪಟೂರಿನಲ್ಲಿ ವ್ಯಾಸಂಗ ಮಾಡುತ್ತಿರುವುದಾಗಿ ಪರಿಚಯಿಸಿ ನಂತರ ಹಣಕ್ಕೆ ಬೇಡಿಕೆ ಇಟ್ಟು, ಹಣ ಕೊಡದಿದ್ದರೆ ಮಾನಹಾನಿ ಮಾಡುವುದಾಗಿಯೂ ಜೊತೆಗೆ ಜೀವ ಬೆದರಿಕೆ ಹಾಕಿದ್ದರು.

ಸ್ವಾಮೀಜಿ ಬೆಂಗಳೂರಿಗೆ ಬಂದ ಸಂದರ್ಭದಲ್ಲಿ ಅವರಿಂದ 4.5 ಲಕ್ಷ ರೂ ಪಡೆದಿದ್ದು, ಮತ್ತೆ ಒಂದು ಕೋಟಿ ಕೊಡಬೇಕೆಂದು ತನ್ನ ಸಹಚರರ ಜೊತೆ ಸೇರಿ ಬೆದರಿಕೆ ಹಾಕಿದ್ದಳು. ಮಹಿಳೆ ಮತ್ತೆ ಮತ್ತೆ ಹಣಕ್ಕೆ ಬೇಡಿಕೆ ಇಟ್ಟಾಗ ಆತಂಕಗೊಂಡ ಸ್ವಾಮೀಜಿ ಸಿಸಿಬಿ ಪೊಲೀಸರ ಮೊರೆ ಹೋಗಿದ್ದರು. ಪ್ರಕರಣ ದಾಖಲು ಮಾಡಿಕೊಂಡ ಪೊಲೀಸರು ತನಿಖೆ ಮಾಡಿ ಸ್ಪೂರ್ತಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಎರಡು ವರ್ಷಗಳ ಹಿಂದೆ ಇದೇ ಸ್ವಾಮೀಜಿ ಹನಿಟ್ರ್ಯಾಪ್‌ ಯತ್ನ ನಡೆದಿತ್ತು. ಈ ವೇಳೆ ಆರು ಕೋಟಿ ರೂ. ಬೇಡಿಕೆ ಇಟ್ಟ ಮೂವರನ್ನು ಸಿಸಿಬಿ ಪೊಲೀಸರು ಬಂಧನ ಮಾಡಿದ್ದರು. ಇದೀಗ ಮತ್ತೆ ಬ್ಲ್ಯಾಕ್‌ಮೇಲ್‌ ಶುರುವಾಗಿದೆ.

ಸದ್ಯಕ್ಕೆ ಸ್ವಾಮೀಜಿ ಕೋರ್ಟ್‌ ಮೊರೆ ಹೋಗಿದ್ದು, ತಮಗೆ ಸಂಬಂಧಿಸಿದ ಯಾವುದೇ ಫೋಟೋಗಳು ಹಾಗೂ ವಿಡಿಯೋಗಳನ್ನು ಪ್ರಸಾರ ಮಾಡದಂತೆ ತಡೆಯಾಜ್ಞೆ ಪಡೆದಿದ್ದಾರೆ. ಪ್ರಕರಣದ ಕುರಿತು ತನಿಖೆ ಮುಂದುವರಿದಿದೆ.