ಭಾನುವಾರ, 25 ಅಕ್ಟೋಬರ್ 2026
Trending

ಅಂಗವೈಕಲ್ಯದಿಂದ ಬಳಲುತ್ತಿದ್ದ ಮಗಳ ಹತ್ಯೆ, ನೊಂದ ತಾಯಿ ಕೂಡಾ ಆತ್ಮಹತ್ಯೆ

ಕುಂದಾಪುರ: ಅಂಗವೈಕಲ್ಯದಿಂದ ಬಳಲುತ್ತಿದ್ದ 14 ವರ್ಷದ ಮಗಳನ್ನು ಕತ್ತಿಯಿಂದ ಹತ್ಯೆ ಮಾಡಿ ನಂತರ ತಾಯಿಯೂ ಆತ್ಮಹತ್ಯೆಗೆ ಶರಣಾದ ಘಟನೆ ಕುಂದಾಪುರ ತಾಲೂಕಿನ ಕೆದೂರು ಗ್ರಾಮ ಪಂಚಾಯತ್‌ ವ್ಯಾಪ್ತಿಯ ಶಾನಾಡಿಯಲ್ಲಿ ಅ.25 ರ ಭಾನುವಾರ ಬೆಳಗ್ಗೆ 8.30ರ ಸುಮಾರಿಗೆ ನಡೆದಿದೆ.

Sponsored

ಸುಧಾಕರ ಅವರ ಪುತ್ರಿ ಸುಪ್ರತಿ (14) ಹಾಗೂ ಪತ್ನಿ ನೇತ್ರಾವತಿ (40) ಮೃತಪಟ್ಟವರು.

ಬಾಲ್ಯದಿಂದಲೇ ಮಗಳು ಸುಪ್ರತಿ ಅಂಗವೈಕಲ್ಯದಿಂದ ಬಳಲುತ್ತಿದ್ದು, ನಡೆದಾಡಲು ಸಾಧ್ಯವಾಗದ ಸ್ಥಿತಿಯಲ್ಲಿದ್ದಳು. ಮಗಳಿಗೆ ಚಿಕಿತ್ಸೆ ನೀಡಿದರೂ ಫಲಕಾರಿಯಾಗಿರಲಿಲ್ಲ. ನೇತ್ರಾವತಿಯವರೇ ತಮ್ಮ ಮಗಳ ಆರೈಕೆ ಮಾಡುತ್ತಿದ್ದು, ಆದರೆ ಮಗಳ ಈ ಸ್ಥಿತಿಯಿಂದ ನೊಂದಿದ್ದರು ಎಂದು ಪತಿ ಸುಧಾಕರ ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಈ ದುರಂತ ನಡೆದಿದೆ ಎನ್ನುವ ಶಂಕೆ ವ್ಯಕ್ತವಾಗಿದೆ.

ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.