ಸೋಮವಾರ, 26 ಅಕ್ಟೋಬರ್ 2026
Trending

ಬಂಟ್ವಾಳ: ಆಟವಾಡುವಾಗ ಕುತ್ತಿಗೆಗೆ ಹಗ್ಗ ಸಿಲುಕಿ 9 ವರ್ಷದ ಬಾಲಕ ಸಾವು

ಬಂಟ್ವಾಳ; ಮನೆಯಲ್ಲಿ ಆಟವಾಡುತ್ತಿದ್ದಾಗ ಆಕಸ್ಮಿಕವಾಗಿ ಕುತ್ತಿಗೆಗೆ ಹಗ್ಗ ಸಿಲುಕಿ ಉಸಿರುಗಟ್ಟಿ 9 ವರ್ಷದ ಬಾಲಕ ಮೃತಪಟ್ಟ ದಾರುಣ ಘಟನೆ ಅ.25 ರಂದು ನಡೆದಿದೆ.

Sponsored

ಬಂಟ್ವಾಳ ತಾಲೂಕಿನ ಕುಕ್ಕಿಪಾಡಿ ನಿವಾಸಿ ಆನಂದ ಪೂಜಾರಿ ಅವರ ಪುತ್ರ ಮೃತಪಟ್ಟ ಬಾಲಕ.

Advertisement
Advertisement

ಅ.25 ರಂದು ಬಾಲಕನ ಬೊಬ್ಬೆ ಕೇಳಿ ಆತನ ಚಿಕ್ಕಪ್ಪ ಜಯಾನಂದ (42) ಅವರು ಅಲ್ಲಿಗೆ ತೆರಳಿ ನೋಡಿದಾಗ, ಮನೆಯಲ್ಲಿ ಆಟವಾಡುತ್ತಿದ್ದ ಬಾಲಕನ ಕುತ್ತಿಗೆಗೆ ಕಿಟಕಿಯಲ್ಲಿದ್ದ ಹಗ್ಗ ಆಕಸ್ಮಿಕವಾಗಿ ಸಿಲುಕಿ ಯಾವುದೇ ಪ್ರತಿಕ್ರಿಯೆ ನೀಡದ ಸ್ಥಿತಿಯಲ್ಲಿದ್ದನು ಎನ್ನಲಾಗಿದೆ.

ಕೂಡಲೇ ಬಾಲಕನನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ವೈದ್ಯರು ಬಾಲಕ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಈ ಕುರಿತು ಪೂಂಜಾಲಕಟ್ಟೆ ಪೊಲೀಸ್‌ ಠಾಣೆಯಲ್ಲಿ ಯುಡಿಆರ್‌ ಪ್ರಕರಣ ದಾಖಲಾಗಿದೆ.

Advertisement