ಸೋಮವಾರ, 26 ಅಕ್ಟೋಬರ್ 2026
Trending

ಬಂಟ್ವಾಳ: ಕಾಲುಸಂಕದಿಂದ ಬಿದ್ದು ನಾಪತ್ತೆಯಾಗಿದ್ದ ವ್ಯಕ್ತಿ ಮೃತದೇಹ ಪತ್ತೆ

ಬಂಟ್ವಾಳ: ತೋಡಿನಲ್ಲಿ ಶನಿವಾರ ರಾತ್ರಿ ನಾಪತ್ತೆಯಾಗಿದ್ದ ವ್ಯಕ್ತಿಯೊಬ್ಬರ  ಮೃತದೇಹ ನಿರಂತರ ಶೋಧ ಕಾರ್ಯಾಚರಣೆಯ ಬಳಿಕ ಅರಳ ಗ್ರಾಮದ ಪಂಬದಗದ್ದೆ ಸಮೀಪ ಸೋಮವಾರ ಬೆಳಗ್ಗೆ ಪತ್ತೆಯಾಗಿದೆ.

Sponsored

ರಾಯಿ ಗ್ರಾಮದ ಪಾಂಚಕೋಡಿ ನಿವಾಸಿ ಜೀವನ್‌ ಪಿಂಟೋ (48) ಮೃತ ವ್ಯಕ್ತಿ.

ಶನಿವಾರ ರಾತ್ರಿ ತಮ್ಮ ಮನೆಯ ಸಮೀಪದ ಹೊಳೆಯಲ್ಲಿ ನಾಪತ್ತೆಯಾಗಿದ್ದ ಇವರು, ಭಾರೀ ಮಳೆಯಿದ್ದರೂ ಅಗ್ನಿಶಾಮಕ ದಳ, ಎನ್‌ಡಿಆರ್‌ಎಫ್‌ ಮತ್ತು ಸ್ಥಳೀಯರು ನಿರಂತರ ಶೋಧ ಕಾರ್ಯಾಚರಣೆ ನಡೆಸಿದ್ದರು. ಸತತ ಕಾರ್ಯಾಚರಣೆಯ ಬಳಿಕ ಸೋಮವಾರ ಬೆಳಗ್ಗೆ ಜೀವನ್‌ ಪಿಂಟೋ ಅವರ ಮೃತದೇಹ ಪತ್ತೆಯಾಗಿದೆ.

ಆಗಸ್ಟ್‌ 1 ರ ರಾತ್ರಿ ಜೀವನ್‌ ಅವರು ಮಾವನ ಮನೆಗೆ ನಡೆದುಕೊಂಡು ಹೋಗುತ್ತಿದ್ದಾಗ ಕಾಲುಸಂಕ ದಾಟುವಾಗ ಕಾಲುಜಾರಿ ತೋಡಿಗೆ ಬಿದ್ದಿರಬಹುದು ಎಂದು ಶಂಕಿಸಲಾಗಿದೆ.

ಈ ಘಟನೆ ಕುರಿತು ಬಂಟ್ವಾಳ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.