ಬೀದರ್: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಸರ್ವೆ ಕಾರ್ಯದ ವೇಳೆ ಬಿಎಲ್ಒ ಹೃದಯಾಘಾತದಿಂದ ಮೃತಪಟ್ಟ ಘಟನೆ ಬೀದರ್ ಜಿಲ್ಲೆಯ ಅಮಲಾಪುರ ಗ್ರಾಮದಲ್ಲಿ ನಡೆದಿದೆ.
ಸುನೀಲ್ (45) ಮೃತ ಬಿಎಲ್ಒ. ಭಾಲ್ಕಿ ತಾಲೂಕಿನ ಮೂಲದ ಸುನೀಲ್ ಅವರು ಕಳೆದ ಹಲವು ದಿನಗಳಿಂದ ಎಸ್ಐಆರ್ ಕಾರ್ಯದಲ್ಲಿದ್ದರು. ಅಮಲಾಪುರ ಗ್ರಾಮದ 33ನೇ ಬೂತ್ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸಂದರ್ಭದಲ್ಲಿ ತೀವ್ರ ಎದೆನೋವು ಕಾಣಿಸಿ, ಕುಸಿದು ಬಿದ್ದಿದ್ದಾರೆ.
ಸ್ಥಳೀಯರು ಕೂಡಲೇ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಆದರೆ ಚಿಕಿತ್ಸೆ ಸಂದರ್ಭ ಸ್ಟಂಟ್ ಅಳವಡಿಸುವ ವೇಳೆ ಚಿಕಿತ್ಸೆ ಫಲಕಾರಿಯಾಗದೆ ಮೃತಹೊಂದಿದ್ದಾರೆ.
ಗಾಂಧಿಗಂಜ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.



