ಸೋಮವಾರ, 26 ಅಕ್ಟೋಬರ್ 2026
Trending

ಬೈಕ್‌ ಅಪಘಾತ: ತೋಟತ್ತಾಡಿ ಯುವಕ ಸಾವು

ಬೆಳ್ತಂಗಡಿ: ಬೆಂಗಳೂರಿನಲ್ಲಿ ಬೈಕ್‌ ಅಪಘಾತ ನಡೆದಿದ್ದು, ಇದರಲ್ಲಿ ಗಾಯಗೊಂಡಿದ್ದ ತೋಟತ್ತಾಡಿ ನಿವಾಸಿ ಯುವಕ ಚಿಕಿತ್ಸೆಗೆ ಸ್ಪಂದಿಸದೆ ಫೆ.20 ರಂದು ಮೃತಪಟ್ಟಿದ್ದಾರೆ.

Sponsored

ಬೆಳ್ತಂಗಡಿ ತಾಲೂಕಿನ ತೋಟತ್ತಾಡಿ ಗ್ರಾಮದ ನಿವಾಸಿ ಸನಲ್‌ ಆಂಟನಿ (25ವ) ಮೃತ ಯುವಕ.

ಫೆ.14 ರಂದು ಬೆಂಗಳೂರಿನ ಬೆಳ್ಳೂರ್‌ ಕ್ರಾಸ್‌ ಬಳಿ ಸಂಭವಿಸಿದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದು, ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಿಸದೆ ಸಾವಿಗೀಡಾಗಿದ್ದಾರೆ.