Home Death Bangalore: ವಿಡಿಯೋ ಮಾಡಿಟ್ಟು ಬಿಜೆಪಿ ಕಾರ್ಯಕರ್ತ ವೆಂಕಟೇಶ್ ಆತ್ಮಹತ್ಯೆ

Bangalore: ವಿಡಿಯೋ ಮಾಡಿಟ್ಟು ಬಿಜೆಪಿ ಕಾರ್ಯಕರ್ತ ವೆಂಕಟೇಶ್ ಆತ್ಮಹತ್ಯೆ

Hindu neighbor gifts plot of land

Hindu neighbour gifts land to Muslim journalist

Bangalore: ಹಣಕಾಸು ನಷ್ಟದಿಂದಾಗಿ ಮನನೊಂದಿದ್ದ ಬಿಜೆಪಿ ಕಾರ್ಯಕರ್ತ (BJP worker) ವೆಂಕಟೇಶ್‌ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.ಮಲ್ಲೇಶ್ವರದ ಬಿಜೆಪಿ ಮಂಡಲದ ಕಾರ್ಯಕರ್ತನಾಗಿದ್ದ ವೆಂಕಟೇಶ್‌ ಮಾಜಿ ಡಿಸಿಎಂ ಅಶ್ವಥ್‌ ನಾರಾಯಣ್‌ (Ashwath Narayan) ಅವರಿಗೂ ಆಪ್ತನಾಗಿದ್ದರು. ನಿನ್ನೆ ಸಂಜೆ ವೈಯಾಲಿಕಾವಲ್‌ನಲ್ಲಿರುವ ತಮ್ಮ ಟೂರ್ಸ್‌ ಅಂಡ್ ಟ್ರಾವೆಲ್ಸ್‌ (Tours And Travels) ಕಚೇರಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸದ್ಯ ಮೃತದೇಹವನ್ನ ಬೌರಿಂಗ್‌ ಆಸ್ಪತ್ರೆಯಲ್ಲಿ ಇರಿಸಲಾಗಿದ್ದು, ಇಂದು ಮಧ್ಯಾಹ್ನ ಅಶ್ವಥ್‌ ನಾರಾಯಣ್‌ ಅವರು ದರ್ಶನ ಮಾಡಲಿದ್ದಾರೆ.ಮತ್ತೊಂದು ಕಡೆ ವೆಂಕಟೇಶ್‌ ಕಳೆದ 2 ದಿನಗಳ ಹಿಂದೆಯೇ ಆತ್ಮಹತ್ಯೆ ಮಾಡಿಕೊಂಡಿದ್ದು, ಇಂದು ಶವ ಪತ್ತೆಯಾಗಿದೆ ಅಂತ ಹೇಳಲಾಗ್ತಿದೆ. ಹಣಕಾಸು ನಷ್ಟದಿಂದಾಗಿ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಆಪ್ತ ಮೂಲಗಳು ಪೊಲೀಸರಿಗೆ ತಿಳಿಸಿವೆ.